ADVERTISEMENT

ಮದ್ದೂರು | ನಗರಸಭೆಗೆ 4 ಗ್ರಾ.ಪಂ. ಸೇರ್ಪಡೆ ಬೇಡ

ಮದ್ದೂರಿನ ತಾಲ್ಲೂಕು ಕಚೇರಿಯ ಮುಂದೆ ಗ್ರಾಮಸ್ಥರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 3:47 IST
Last Updated 5 ಸೆಪ್ಟೆಂಬರ್ 2025, 3:47 IST
ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಬಾರದು ಎಂದು ಆಗ್ರಹಿಸಿ ನಾಲ್ಕು ಗ್ರಾ.ಪಂ.ನ ಕೆಲ ಗ್ರಾಮಸ್ಥರು ತಾಲ್ಲೂಕು ಕಚೇರಿಯ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು 
ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಬಾರದು ಎಂದು ಆಗ್ರಹಿಸಿ ನಾಲ್ಕು ಗ್ರಾ.ಪಂ.ನ ಕೆಲ ಗ್ರಾಮಸ್ಥರು ತಾಲ್ಲೂಕು ಕಚೇರಿಯ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು    

ಮದ್ದೂರು: ಮದ್ದೂರು ನಗರಸಭೆಗೆ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆಗೊಳಿಸಬಾರದು ಎಂದು ಆಗ್ರಹಿಸಿ ಗ್ರಾಮಸ್ಥರು ಗುರುವಾರ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ನಗರಸಭೆಯ ನಾಮಫಲಕ ಅನಾವರಣಗೊಳ್ಳುತ್ತಿದ್ದ ಸಂದರ್ಭದಲ್ಲೇ ಗ್ರಾಮಸ್ಥರು, ರೈತ ನಾಯಕಿ ಸುನಂದಾ ಜಯರಾಮ್ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಸುನಂದಾ ಜಯರಾಮ್ ಮಾತನಾಡಿ, ‘ಈ ಹಿಂದೆ ನಾಲ್ಕು ಗ್ರಾ.ಪಂ ಗಳ ಗ್ರಾಮಗಳನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಬಾರದು ಎಂದು ಹಲವಾರು ಬಾರಿ ಪಟ್ಟಣದ ತಾಲ್ಲೂಕು ಕಚೇರಿ ಸೇರಿದಂತೆ ಸಂಬಂಧಪಟ್ಟ ಸ್ಥಳೀಯ ಗ್ರಾ. ಪಂ ಕಚೇರಿಯ ಮುಂದೆ ಪ್ರತಿಭಟನೆಯನ್ನು ನಡೆಸಲಾಗಿದೆ. ಸೇರ್ಪಡೆಗೊಂಡರೆ ಗ್ರಾಮೀಣ ಕೃಪಾoಕ, ನರೇಗಾ ಕೆಲಸ ಕೈತಪ್ಪುವುದರ ಜೊತೆಗೆ ಆಸ್ತಿ ತೆರಿಗೆಗಳೂ ಹೆಚ್ಚಾಗುತ್ತವೆ ಎಂದು ಮನವಿ ಸಲ್ಲಿಸಲಾಗಿತ್ತು’ ಎಂದರು.

ADVERTISEMENT

ಆದರೆ ಈ ಬಗ್ಗೆ 4 ಗ್ರಾಮಗಳ ಮುಖಂಡರ ಸಭೆ ಕರೆದು ಅಭಿಪ್ರಾಯ ಪಡೆದು ಚರ್ಚೆಸದೆ ಏಕಾಏಕಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕೈಗೆ ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಗಳನ್ನು ಹಿಡಿದ ಪ್ರತಿಭಟನಾಕಾರರು ‘ನಮ್ಮ ಗ್ರಾಮ ನಮ್ಮ ಪಂಚಾಯಿತಿ, ನಗರಸಭೆ ಬೇಡ’ ಎಂದು ಘೋಷಣೆಗಳನ್ನು ಕೂಗಿದರು. ಈ ವೇಳೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನೆಯಲ್ಲಿ ರೈತ ಸಂಘದ ಲಿಂಗಪ್ಪಾಜಿ, ಗೊರವನಹಳ್ಳಿ ಪ್ರಸನ್ನ, ಸೋಮನಹಳ್ಳಿ ಸತೀಶ್ ಸೇರಿದಂತೆ ಹಲವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.