ಪಿಡಿಒ ಸಚಿನ್
ಮದ್ದೂರು: ತಾಲ್ಲೂಕಿನ ಕೊಪ್ಪ ಹೋಬಳಿಯ ಬೆಕ್ಕಳಲೆ ಗ್ರಾಮದಲ್ಲಿ ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಕ್ಕಳಲೆ ಗ್ರಾ.ಪಂ.ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್, ಮೂಲತಃ ತಾಲ್ಲೂಕಿನ ತಗ್ಗಹಳ್ಳಿ ಗ್ರಾಮದ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಗ್ರಾಮದ ಶಿವಲಿಂಗಯ್ಯ ಎಂಬುವರಿಂದ ಪೌತಿ ಖಾತೆ ಮಾಡಿಕೊಡುವ ಸಲುವಾಗಿ ಪಿಡಿಒ ಸಚಿನ್ ₹5 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಶಿವಲಿಂಗಯ್ಯ ದೂರು ನೀಡಿದ್ದರು.
ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಬ್ಯಾಟರಾಯಗೌಡ, ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.