ಸಾವು
ಪ್ರಾತಿನಿಧಿಕ ಚಿತ್ರ
ಮದ್ದೂರು: ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಿಕ್ಕೇರಿ ಬಳಿಯ ಗೊಲ್ಲರಕೊಪ್ಪಲು ಗ್ರಾಮದ ದೀಪಕ್ (22) ಎಂಬುವರು ಸಾವನ್ನಪ್ಪಿರುವ ಘಟನೆ ಪಟ್ಟಣದ ಎಳನೀರು ಮಾರುಕಟ್ಟೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ದೀಪಕ್ ಸೋಮನಹಳ್ಳಿಗೆ ಬಂದು ನಂತರ ತನ್ನ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಬೈಕ್ ಡಿಕ್ಕಿ ಹೊಡೆದಿದೆ. ಸವಾರನ ತಲೆಯ ಮೇಲೆ ಚಕ್ರ ಹರಿದ ಪರಿಣಾಮ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಟ್ಟಣದ ಸಂಚಾರ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.