ಸಾವು
(ಪ್ರಾತಿನಿಧಿಕ ಚಿತ್ರ)
ಮದ್ದೂರು: ಪಟ್ಟಣದ ಚನ್ನೇಗೌಡನ ಬಡಾವಣೆಯಲ್ಲಿ ಶನಿವಾರ ಬೆಳಗಿನ ಜಾವ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವೇಲ್‌ನಿಂದ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆ ನಿವಾಸಿ ಆಶಾ (19) ಮೃತರು.
ಪತಿ ಚಂದನ್ ಗೌಡ ಅವರು ಪತ್ನಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೋಷಕರು ಚಂದನ್ ಗೌಡ ವಿರುದ್ಧ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಿಪಿಐ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿದರು.
ಪ್ರೀತಿಸಿ ಮದುವೆ ಆಗಿದ್ದ ಚಂದನ್ ಗೌಡ ಅವರೊಂದಿಗೆ ಆಶಾ ಒಂದೂವರೆ ವರ್ಷದ ಹಿಂದೆ ಎಳನೀರು ವ್ಯಾಪಾರ ಮಾಡಿಕೊಂಡು ಪಟ್ಟಣದ ಚನ್ನೆಗೌಡ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆಶಾ ಅವರಿಗೆ ಭಾನುವಾರ ಸೀಮಂತ ಕಾರ್ಯಕ್ರಮವನ್ನು ಮಾಡಲು ತಯಾರಿ ಕೂಡ ನಡೆಸಲಾಗಿತ್ತು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.