ಸಾವು
ಪ್ರಾತಿನಿಧಿಕ ಚಿತ್ರ
ಮಳವಳ್ಳಿ: ನೆಲಮಾಕನಹಳ್ಳಿ-ನೆಲ್ಲೂರು ರಸ್ತೆಯಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ನೆಲ್ಲೂರು ಗ್ರಾಮದ ನಾಗರಾಜು (32) ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಿಗ್ಗೆ ನಾಗರಾಜು ಬೈಕ್‌ನಲ್ಲಿ ನೆಲ್ಲೂರು ಗ್ರಾಮದಿಂದ ನೆಲಮಾಕನಹಳ್ಳಿ ಕಡೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ನಾಗರಾಜು ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆಗೆ ಸ್ಪಂಧಿಸದೆ ರಾತ್ರಿ ಸಾವನ್ನಪ್ಪಿದ್ದಾರೆ.
ಮತ್ತೊಂದು ಬೈಕ್ ಸವಾರ ನೆಲ್ಲೂರು ಗ್ರಾಮದ ಸುಮಂತ್, ಹಿಂಬದಿ ಸವಾರ ವಿಜಯ್ ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.