
ಮಳವಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಟ್ಟಣದ ಸೆಸ್ಕ್ ಕಚೇರಿಯ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ವಿದ್ಯುತ್ ಖಾಸಗಿಕರಣ ಹಾಗೂ ವಿದ್ಯುತ್ ಕಾಯ್ದೆ-2026ರ ತಿದ್ದುಪಡಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನೌಕರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಪುಟ್ಟಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರದ ಇಂಥ ನೀತಿಯಿಂದ ಮುಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ತೊಂದರೆಯಾಗಲಿದೆ. ಸಾರ್ವಜನಿಕರ ಆಸ್ತಿಯನ್ನು ಖಾಸಗಿಕರಣ ಮಾಡುತ್ತಿರುವುದರಿಂದ ಕೆಳಹಂತ ನೌಕಕರು ಬದುಕಿಗೆ ಸಂಕಷ್ಟ ಎದುರಾಗಲಿದೆ. ಕೂಡಲೇ ಕೇಂದ್ರ ಸರ್ಕಾರ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿದರು.
ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಎಸ್.ಪ್ರೇಮ್ ಕುಮಾರ್ ಮಾತನಾಡಿ, ರೈತ ದೇಶದ ಬೆನ್ನೆಲುಬು. ರೈತರಿಗೆ ಸರ್ಕಾರ ಹಲವು ಯೋಜನೆಯಡಿ ವಿದ್ಯುತ್ ನೀಡಲಾಗುತ್ತಿದೆ. ಖಾಸಗೀಕರಣ ಮಾಡಿದರೆ ಯಾರೊಬ್ಬರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ರೈತ ವಿರೋಧಿ ವಿದ್ಯುತ್ ಕಾಯ್ದೆ ಬಿಲ್ಲನ್ನು ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸೆಸ್ಕ್‌ನ ಗ್ರಾಮಾಂತರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಿತೀಶ್, ಲೆಕ್ಕಾಧಿಕಾರಿ ಸತೀಶ್, ಸೆಸ್ಕ್ ನೌಕರರ ಸಂಘದ ಅಧ್ಯಕ್ಷ ಮಂಜು, ಕಾರ್ಯದರ್ಶಿ ದಿವಾಕರ್, ಗಿರಿದಾಸ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.