ADVERTISEMENT

ಮಳವಳ್ಳಿ: ಸಿಲಿಂಡರ್ ವಾಣಿಜ್ಯ ಬಳಕೆ; ಕಾನೂನು ಕ್ರಮದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2025, 12:14 IST
Last Updated 24 ಮಾರ್ಚ್ 2025, 12:14 IST
<div class="paragraphs"><p>ಅಡುಗೆ ಅನಿಲ ಸಿಲಿಂಡರ್ </p></div>

ಅಡುಗೆ ಅನಿಲ ಸಿಲಿಂಡರ್

   

(ಸಾಂದರ್ಭಿಕ ಚಿತ್ರ)

ಮಳವಳ್ಳಿ: ‘ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುವುದು ಕಂಡು ಬಂದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಸ್.ವಿ.ಲೋಕೇಶ್ ಎಚ್ಚರಿಕೆ ನೀಡಿದ್ದಾರೆ.

ADVERTISEMENT

‘ಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಸಪ್ಪೆ ಅಂಡ್ ಡಿಸ್ಟ್ರಿಬ್ಯೂಷನ್) ಆರ್ಡರ್ 2022ರ ನಿಯಮಾವಳಿಗಳ ಪ್ರಕಾರ ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಜೊತೆಗೆ ತಾಲ್ಲೂಕಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ಹೋಟೆಲ್, ಡಾಬಾ, ರೆಸ್ಟೋರೆಂಟ್‌ಗಳು, ಬೀದಿಬದಿ ಗಾಡಿಗಳು, ಮತ್ತು ಬೇಕರಿಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುವುದು ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ತಾಲ್ಲೂಕಿನ ಸಂಬಂಧಪಟ್ಟ ಗ್ಯಾಸ್ ಏಜೆನ್ಸಿಗಳು ಸಹ ಗೃಹಬಳಕೆಯ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಅಕ್ರಮವಾಗಿ ಸರಬರಾಜು ಮಾಡಿದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955ರ ಅನ್ವಯ ಏಜೆನ್ಸಿಯವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.