ADVERTISEMENT

ಮಳವಳ್ಳಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 14:30 IST
Last Updated 4 ಜುಲೈ 2025, 14:30 IST
ಮಳವಳ್ಳಿ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ಮುಸ್ಲಿಮರು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದರು
ಮಳವಳ್ಳಿ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ಮುಸ್ಲಿಮರು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದರು   

ಮಳವಳ್ಳಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಶುಕ್ರವಾರ ಮುಸ್ಲಿಮರು ಮೌನ ಪ್ರತಿಭಟನೆ ನಡೆಸಿದರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಮರು, ಮಾನವ ಸರಪಳಿ ನಿರ್ಮಿಸಿ, ಕೂಡಲೇ ವಕ್ಫ್ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮುಖಂಡ ಮಹಮದ್ ಜಬೀಉಲ್ಲಾ ಮಾತನಾಡಿ, ‘ವಕ್ಫ್ ಕಾಯ್ದೆ ತಿದ್ದುಪಡಿಯ ಮೂಲಕ ಮುಸ್ಲಿಮರ ಹಕ್ಕು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ನಮ್ಮ ಹಕ್ಕು ನಮಗೆ ಬೇಕು. ಕೂಡಲೇ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ರದ್ದುಪಡಿಸಬೇಕು. ದೇಶದಲ್ಲಿ ಮುಸ್ಲಿಂ ಮತ್ತು ಎಲ್ಲರೂ ಜತೆಯಾಗಿ ಜೀವನ ನಡೆಸುತ್ತಿದ್ದೇವೆ. ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು.

ADVERTISEMENT

ಮುಖಂಡ ಮೆಹಬೂಬ್ ಪಾಷಾ ಮತ್ತು ನಜೀಮ್ ಷರೀಷ್ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನಕ್ಕೆ ವಿರುದ್ಧವಾಗಿ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಸಂವಿಧಾನದಲ್ಲಿ ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಬಾರದು. ನಾವೆಲ್ಲರೂ ಈ ಮಣ್ಣಿನ ಮಕ್ಕಳು, ಸಂವಿಧಾನ ನೀಡಿರುವ ನಮ್ಮ ಹಕ್ಕನ್ನು ಕಿತ್ತುಕೊಳ್ಳಬಾರದು. ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸಲು ಎಲ್ಲರೂ ಕೈಜೋಡಿಸಬೇಕು’ ಎಂದು ವಿನಂತಿಸಿದರು.

ಪುರಸಭೆ ಸದಸ್ಯ ನೂರುಲ್ಲಾ, ಮುಖಂಡರಾದ ಬಸೀರ್ ಮಹಮದ್, ಶಫಿ, ಹತಹುಲ್ಲಾ ಷರಿಷ್, ಬಾಬು, ಮುನೀರ್ ಪಾಷಾ, ಮುನ್ನಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.