
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಮಳವಳ್ಳಿ: ತಾಲ್ಲೂಕಿನ ಪಂಡಿತಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಭಾನುವಾರ ಮಧ್ಯಾಹ್ನ ಬೈಕ್ ನಿಯಂತ್ರಣ ತಪ್ಪಿ ಸೋಲಾರ್ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಬೈಕ್ ಸವಾರ ರಾಮನಗರ ತಾಲ್ಲೂಕಿನ ಕೆ.ಜಿ.ಹೊಸಹಳ್ಳಿ ಗ್ರಾಮದ ಗೋವಿಂದರಾಜು(27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಮ್ಮ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಬೈಕ್ ರಸ್ತೆಯ ಬದಿಯ ಕಂಬಕ್ಕೆ ಡಿಕ್ಕಿಯಾಗಿದೆ. ಹಿಂಬದಿ ಸವಾರರಾದ ಸಾಗರ್ ಮತ್ತು ಶ್ರೀನಿವಾಸ್ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.