ADVERTISEMENT

ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 9 ಮೇ 2025, 12:38 IST
Last Updated 9 ಮೇ 2025, 12:38 IST
<div class="paragraphs"><p>ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ&nbsp;ಕಿರುಗಾವಲು ಪೊಲೀಸ್ ಠಾಣೆ ಎದುರು ಹಿಂದುತ್ವ ಪರ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು</p></div>

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣೆ ಎದುರು ಹಿಂದುತ್ವ ಪರ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು

   

ಮಳವಳ್ಳಿ (ಮಂಡ್ಯ): ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಯುವಕನ್ನು ತಾಲ್ಲೂಕಿನ ಕಿರುಗಾವಲು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಬಂಧಿತ ಆರೋಪಿ.

ADVERTISEMENT

ಮೇ 8ರಂದು ಎಐ ತಂತ್ರಜ್ಞಾನ ಬಳಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿ ಬಿಜೆಪಿ ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸರ ಗಮನಕ್ಕೆ ತಂದಿದ್ದರು.

ತಕ್ಷಣವೇ ಕಾರ್ಯಪ್ರವೃತ್ತರಾದ ಸಿಪಿಐ ಬಿ.ಎಸ್.ಶ್ರೀಧರ್ ಹಾಗೂ ಪಿಎಸ್ಐ ಡಿ.ರವಿಕುಮಾರ್ ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಬಂಧಿಸಿದ್ದಾರೆ. 

ಸ್ಥಳೀಯರ ಆಕ್ರೋಶ: ಪ್ರಧಾನಿ ನರೇಂದ್ರಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಹಂಚಿಕೊಂಡಿರುವ ಜಾವೀದ್ ಪಾಷ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸ್ ಠಾಣೆ ಮುಂದೆ ನೂರಾರು ಮಂದಿ ಜಮಾಯಿಸಿ ಆರೋಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಮಂಡ್ಯ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಮೋಹನ್ ಮಾತನಾಡಿ, ‘ಕಾಶ್ಮೀರದಲ್ಲಿ 26 ಮಂದಿ ಬಲಿ ಪಡೆದ ಪಾಕಿಸ್ತಾನ ಉಗ್ರರ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿರುವ ಇಂಥ ವ್ಯಕ್ತಿಯ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.