ADVERTISEMENT

ಮಳವಳ್ಳಿ: ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 4:55 IST
Last Updated 24 ಆಗಸ್ಟ್ 2025, 4:55 IST
<div class="paragraphs"><p><strong>ಧರ್ಮಸ್ಥಳ ಹಾಗೂ ಡಿ.ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ಮಳವಳ್ಳಿ ಪಟ್ಟಣದಲ್ಲಿ ರಾಜಕೀಯ ಪಕ್ಷಗಳು ಹಾಗೂ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.</strong></p></div>

ಧರ್ಮಸ್ಥಳ ಹಾಗೂ ಡಿ.ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ಮಳವಳ್ಳಿ ಪಟ್ಟಣದಲ್ಲಿ ರಾಜಕೀಯ ಪಕ್ಷಗಳು ಹಾಗೂ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

   

ಮಳವಳ್ಳಿ: ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜವನ್ನು ಒಡೆಯುವ ಕೆಲಸ ಮಾಡುವ ಮೂಲಕ  ಅಶಾಂತಿ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಂದೂರು ರಸಸಿದ್ದೇಶ್ವರ ಮಠದ ನಂಜುಂಡಸ್ವಾಮಿ ಆಗ್ರಹಿಸಿದರು.

ಧರ್ಮಸ್ಥಳ ಹಾಗೂ ಡಿ.ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ಪಟ್ಟಣದಲ್ಲಿ ರಾಜಕೀಯ ಪಕ್ಷಗಳು ಹಾಗೂ ಹಿಂದೂಪರ ಸಂಘಟನೆಗಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ADVERTISEMENT

ಸುಳ್ಳು ಆರೋಪಗಳು ಹಾಗೂ ಅಪಪ್ರಚಾರಗಳ ಮೂಲಕ ಕೋಟ್ಯಂತರ ಭಕ್ತರ ನಂಬಿಕೆಗೆ ಧಕ್ಕೆ ಉಂಟು ಮಾಡಲಾಗುತ್ತಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಅಲ್ಲಿನ ಧರ್ಮಾಧಿಕಾರಿಗಳನ್ನು ಕೀಳಾಗಿ ಬಿಂಬಿಸುತ್ತಿರುವುದು ನಾವು ಸಹಿಸುವುದಿಲ್ಲ, ಜನರು ಬೀದಿಗಿಳಿದು ಹೋರಾಟ ನಡೆಸುವ ಮುನ್ನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಅಪ್ಪಾಜಿಗೌಡ ಹಾಗೂ ಕ್ಯಾತನಹಳ್ಳಿ ಅಶೋಕ್ ಮಾತನಾಡಿ, ಹಿಂದೂ ಧರ್ಮ, ಶ್ರದ್ಧಾ ಕೇಂದ್ರಗಳ ರಕ್ಷಣೆಗೆ ಜನರು ಬೀದಿಗಿಳಿದು ಹೋರಾಟ ನಡೆಸಬೇಕಾಗಿದೆ. ಈ ಹಿಂದೆ, ಶಬರಿಮಲೆ, ತಿರುಪತಿ ಈಗ ಧರ್ಮಸ್ಥಳ ಕ್ಷೇತ್ರವನ್ನು ಮತಾಂಧರು ಟಾರ್ಗೆಟ್ ಮಾಡಿದ್ದಾರೆ. ವೀರೇಂದ್ರ ಹೆಗ್ಗಡೆ ಅವರು ಹಾಗೂ ಗ್ರಾಮಾಭಿವೃದ್ಧಿ ಸಂಸ್ಥೆಯನ್ನು ಮುಗಿಸುವ ಸಂಚು ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸದ್ಗಣ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೂಗಳ ಶ್ರದ್ಧೆ ಭಕ್ತಿಯ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೂಡಲೇ ನಿಲ್ಲಿಸಬೇಕು ಹಾಗೂ ಈ ಷಡ್ಯಂತ್ರದಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪುರಸಭೆ ಸದಸ್ಯ ಟಿ.ನಂದಕುಮಾರ್ ಹಾಗೂ ಮಾಜಿ ಅಧ್ಯಕ್ಷ
ಎಂ.ಎ.ಚಿಕ್ಕರಾಜು ಮಾತನಾಡಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ಕೃಷ್ಣ, ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಎನ್.ಬಸವರಾಜು, ಸದಸ್ಯ ರವಿ, ಮುಖಂ
ಡರಾದ ಯಮದೂರು ಸಿದ್ದರಾಜು, ಮಧು ಗಂಗಾಧರ್, ಮೋಹನ್, ಕೆ.ಸಿ.ನಾಗೇಗೌಡ, ಎನ್.ಕೆ.ಕುಮಾರ್, ಎಂ.ಎನ್.ಮಹೇಶ್ ಕುಮಾರ್, ಮೂರ್ತಿ, ಚಿಕ್ಕಮರಿ, ರಾಜೀವ್, ಸುಂದ್ರಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.