ಹಣ
ಮಳವಳ್ಳಿ: ತಾಲ್ಲೂಕಿನ ಹಿಟ್ಟನಹಳ್ಳಿಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂಬಾಗಿಲಿನ ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ₹1 ಲಕ್ಷ ನಗದು ಹಾಗೂ 12 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಗ್ರಾಮದ ಲಲಿತಮ್ಮ ಎಂಬುವವರು ಜು.23ರಂದು ಮನೆಯ ಬಾಗಿಲು ಹಾಕಿಕೊಂಡು ಕುಟುಂಬಸ್ಥರೊಂದಿಗೆ ಬೆಂಗಳೂರಿನ ಸಂಬಂಧಿಕರ ಮನೆ ಹೋಗಿದ್ದರು. ಇತ್ತೀಚೆಗೆ ಮನೆಗೆ ಅವರು ವಾಪಸ್ ಆದಾಗ, ಕಳ್ಳತನ ಆಗಿರುವುದು ಗೊತ್ತಾಗಿದೆ.
ಮತ್ತೊಂದು ಕಳವು ಪ್ರಕರಣ: ಹಿಟ್ಟನಹಳ್ಳಿಕೊಪ್ಪಲು ಗ್ರಾಮದ ಹೇಮಾ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮೀಟಿ ಒಳಗುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಬೆಳ್ಳಿಯ ಸಾಮಗ್ರಿಗಳು, 5 ಗ್ರಾಂ ಚಿನ್ನದ ಓಲೆ ಹಾಗೂ ₹ 50 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಈ ಎರಡು ಪ್ರಕರಣಗಳನ್ನು ಕಿರುಗಾವಲು ಪೊಲೀಸರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.