ADVERTISEMENT

ಕೆಮಿಕಲ್ ಟ್ಯಾಂಕ್ ಸ್ಫೋಟ:ಮೃತ ಕಾರ್ಮಿಕರ ಕುಟುಂಬಕ್ಕೆ ₹50ಲಕ್ಷ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 5:26 IST
Last Updated 19 ಫೆಬ್ರುವರಿ 2026, 5:26 IST
ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸಿಐಟಿಯು ಮುಖಂಡರಾದ ಸಿ.ಕುಮಾರಿ ಅವರು ಗಾಯಾಳು ಕಾರ್ಮಿಕನ ಆರೋಗ್ಯ ವಿಚಾರಿಸಿದರು 
ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸಿಐಟಿಯು ಮುಖಂಡರಾದ ಸಿ.ಕುಮಾರಿ ಅವರು ಗಾಯಾಳು ಕಾರ್ಮಿಕನ ಆರೋಗ್ಯ ವಿಚಾರಿಸಿದರು    

ಮಂಡ್ಯ: ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಸಮೀಪದ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ಸುರಕ್ಷತೆ ನೀಡದೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಕಾರಣ ರಾಸಾಯನಿಕ ತುಂಬಿದ ಟ್ಯಾಂಕ್ ಸ್ಫೋಟ ಘಟನೆ ನಡೆದಿದೆ ಎಂದು ಸಿಐಟಿಯು ಎಂದು ಆರೋಪಿಸಿದೆ. 

ಇಬ್ಬರು ಕಾರ್ಮಿಕರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘನಘೋರ ಘಟನೆಯು ರಾಸಾಯನಿಕ ತುಂಬಿದ್ದ ದೊಡ್ಡ ಟ್ಯಾಂಕ್‌ ಸ್ಥಳಾಂತರದ ಸಂದರ್ಭದಲ್ಲಿ ಸಂಭವಿಸಿದೆ. ಘಟನೆಗೆ ಕಾರಣರಾದ ಅದರ ಮಾಲೀಕರಾದ ಎಂ.ಎಲ್ ಮುನಿರತ್ನ ಶೆಟ್ಟಿ ಹಾಗೂ ಗುತ್ತಿಗೆದಾರ ಗುಡ್ಡುಖಾನ್ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಗಂಭೀರ ಕಾನೂನು ಕ್ರಮ ಜರುಗಿಸಬೇಕು ಎಂದು ಸಿಐಟಿಯು ಮಂಡ್ಯ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಮೃತಪಟ್ಟ ಆಕಾಶ್ ಮತ್ತು ಕಲ್ಲುಕಾನ್ ಅವರ ಕುಟುಂಬಸ್ಥರಿಗೆ ತಲಾ ₹50 ಲಕ್ಷ ಪರಿಹಾರವನ್ನು ನೀಡಬೇಕು ಹಾಗೂ ಗಂಭೀರವಾಗಿ ಗಾಯಗೊಂಡಿರುವ ಸಂತೋಷ್ ರಾವ್, ರಾಜೀವ್ ಖಾಸಿಂ ಅವರಿಗೆ ಅಗತ್ಯ ಚಿಕಿತ್ಸೆ ಮತ್ತು ಕಾನೂನು ಬದ್ಧ ಸೌಲಭ್ಯಗಳನ್ನು ಹಾಗೂ ಸೂಕ್ತ ಪರಿಹಾರವನ್ನು ಕಾರ್ಮಿಕ ಇಲಾಖೆಯು ತಕ್ಷಣ ಕೊಡಿಸಬೇಕೆಂದು ಸಿಐಟಿಯು ಮುಖಂಡರಾದ ಸಿ.ಕುಮಾರಿ ಒತ್ತಾಯಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.