
ಮಂಡ್ಯ: ಗ್ರಾಮೀಣ ಭಾಗದ ಜನರು ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸುವುದು ಮುಖ್ಯವಾಗಬೇಕು ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಸಲಹೆ ನೀಡಿದರು.
ತಾಲ್ಲೂಕಿನ ಮುದಗಂದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸಿದ್ಧಿಚನ್ನೇಗೌಡ ಅವರ 10ನೇ ವರ್ಷದ ಚಿರಸ್ಮರಣೆ ಅಂಗವಾಗಿ ಮಂಗಳವಾರ ನಡೆದ ಉಚಿತ ಆರೋಗ್ಯ ಶಿಬಿರ, ಪ್ರತಿಭಾ ಪುರಸ್ಕಾರ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಸದಸ್ಯರ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯ ಇದ್ದಂತಹ ಸಂದರ್ಭದಲ್ಲಿ ಒಳ್ಳೆಯ ಕೆಲಸ ಮಾಡಿದರೆ ಅವರ ಹೆಸರು ಚಿರಾಯುವಾಗಿ ಉಳಿಯುತ್ತದೆ ಎನ್ನುವುದಕ್ಕೆ ಸಿದ್ದಿ ಚನ್ನೇಗೌಡ ಅವರ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವೇ ಸಾಕ್ಷಿ. ಗ್ರಾಮಾಂತರ ಪ್ರದೇಶದ ಹೆಣ್ಣು ಮಕ್ಕಳು ಆರೋಗ್ಯದ ಕಡೆ ನಿಗಾ ವಹಿಸಬೇಕು. ಮುಖ್ಯವಾಗಿ ಗರ್ಭಕೋಶ ಕ್ಯಾನ್ಸರ್ ಬಗ್ಗೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮಾತನಾಡಿ, ಸಿದ್ದಿ ಚನ್ನೆಗೌಡ ಅವರ ಪುಣ್ಯಸ್ಮರಣೆಯಲ್ಲಿ 23 ನುರಿತ ವೈದ್ಯರನ್ನು ಕರೆಸಿ ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರನ್ನು ಗೌರವಿಸುವ ಕಾರ್ಯಕ್ರಮ ನಡೆಸುತ್ತಿರುವುದು ಮೆಚ್ಚುವ ಕೆಲಸವಾಗಿದೆ ಎಂದು ಶ್ಲಾಘಿಸಿದರು.
ಮುಖಂಡರಾದ ಪುರದಕೊಪ್ಪಲು ಶಂಕರೇಗೌಡ, ರವಿ ಬೋಜೇಗೌಡ, ಬೆಟ್ಟಸ್ವಾಮಿ, ಬಸವೇಗೌಡ, ಕಲಾವಿದ ಕೆ.ಆರ್.ಪೇಟೆ ಶಿವರಾಜು ಭಾಗವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.