ADVERTISEMENT

ಮಂಡ್ಯ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 13:41 IST
Last Updated 5 ಡಿಸೆಂಬರ್ 2023, 13:41 IST
ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಮಾತನಾಡಿದರು
ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಮಾತನಾಡಿದರು   

ಮಂಡ್ಯ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಒಟ್ಟು 23 ಸಾವಿರ ಸಾಕು ನಾಯಿ, 56 ಸಾವಿರ ಬೀದಿ ನಾಯಿಗಳಿವೆ. ಸ್ಥಳೀಯ ಸಂಸ್ಥೆಗಳು ಮುತುವರ್ಜಿ ವಹಿಸಿ, ಮಾನವೀಯ ರೀತಿಯಲ್ಲಿ ನಾಯಿಗಳನ್ನು ಹಿಡಿದು ಸಂತಾನಶಕ್ತಿ ನಿಯಂತ್ರಣ ಶಸ್ತ್ರಚಿಕಿತ್ಸೆ ಮಾಡಬೇಕು.
ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು’ ಎಂದರು.

ADVERTISEMENT

‘ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವುದಕ್ಕೆ ಒಂದು ನಾಯಿಗೆ ₹1500 ವೆಚ್ಚ ತಗಲುತ್ತದೆ. ಗ್ರಾ.ಪಂ. ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಇದಕ್ಕಾಗಿ ಅನುದಾನವನ್ನು ಕ್ರೋಡೀಕರಣ ಮಾಡಿಕೊಳ್ಳಬೇಕು. ರೇಬಿಸ್ ನಿರೋಧಕ ಚುಚ್ಚುಮದ್ದು ನೀಡಬೇಕು’ ಎಂದು ಸೂಚಿಸಿದರು.

‘ಪಶುಪಾಲನೆ ಇಲಾಖೆ, ಸ್ಥಳೀಯ ಸಂಸ್ಥೆಯವರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಕೇಂದ್ರದ ಅವಶ್ಯಕತೆ ಇದೆ. ಇದಕ್ಕಾಗಿ ಜಿಲ್ಲೆಯಲ್ಲಿ ಅರ್ಧ ಎಕರೆ ಸ್ಥಳವನ್ನು ಗುರುತಿಸಿ ಕೇಂದ್ರ ಸ್ಥಾಪಿಸುವುದಕ್ಕೆ ಚಿಂತಿಸಲಾಗುತ್ತಿದೆ ಎಂದರು. ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ಆದ್ಯತೆ ಮೇರೆಗೆ ಅಲ್ಲಿ ಸಂತಾನಶಕ್ತಿ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.