ADVERTISEMENT

ಪರಿಸರಸ್ನೇಹಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ: : ಜಿಲ್ಲಾಧಿಕಾರಿ

ಕೆರೆ–ಕಟ್ಟೆಗಳಿಗೆ ಹೂ, ತೋರಣ ಎಸೆಯಬೇಡಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 5:04 IST
Last Updated 14 ಆಗಸ್ಟ್ 2025, 5:04 IST
ಪರಿಸರ ಸ್ನೇಹಿ ಗಣೇಶ ಮೂರ್ತಿಗಳು
ಪರಿಸರ ಸ್ನೇಹಿ ಗಣೇಶ ಮೂರ್ತಿಗಳು   

ಮಂಡ್ಯ: ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಾನೂನು ಬಾಹಿರವಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಪತಿ ಹಬ್ಬ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿ.ಒ.ಪಿ. ಗಣಪತಿ ಮೂರ್ತಿ ಸಾಗಣೆ ತಡೆಗಟ್ಟಲು ಅಧಿಕಾರಿಗಳು ಚೆಕ್ ಪೋಸ್ಟ್ ಬಳಿ ಹಾಗೂ ಮಾರಾಟ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ADVERTISEMENT

ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಆಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ, ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಿ ಎಂದರು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದರು.

ಸಭೆಯಲ್ಲಿ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್‌. ಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಎಚ್, ನಗರಸಭೆ ಪೌರಾಯುಕ್ತೆ ಪಂಪಾಶ್ರೀ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಏಕ ಗವಾಕ್ಷಿ ಕೇಂದ್ರ ತೆರೆಯಲಾಗುವುದು
ಕುಮಾರ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.