ADVERTISEMENT

ಮಂಡ್ಯ | ಕ್ರೀಡಾ ಆಸಕ್ತಿ ಬೆಳೆಸಿಕೊಳ್ಳಿ: ಜಿಲ್ಲಾಧಿಕಾರಿ ಕುಮಾರ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2025, 12:05 IST
Last Updated 10 ಮಾರ್ಚ್ 2025, 12:05 IST
ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಕುಮಾರ ಅವರು ಕ್ರೀಡಾಪಟುಗಳಿಗೆ ಹಸ್ತಲಾಘವ ಮಾಡಿ ಶುಭಕೋರಿದರು. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು 
ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಕುಮಾರ ಅವರು ಕ್ರೀಡಾಪಟುಗಳಿಗೆ ಹಸ್ತಲಾಘವ ಮಾಡಿ ಶುಭಕೋರಿದರು. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು    

ಮಂಡ್ಯ: ‘ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಪ್ರತಿದಿನ‌ ಕೆಲಸ ನಿರ್ವಹಿಸಲು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ದೇಹವನ್ನು ದಂಡಿಸುವ ಕ್ರೀಡೆ ಹಾಗೂ ವ್ಯಾಯಾಮ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕ್ರೀಡಾ ಆಸಕ್ತಿಯನ್ನು ಬೆಳಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಚಟುವಟಿಕೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಅತಿ ಮುಖ್ಯ ಎಂದು ಹೇಳಿದರು.

ಜಿಲ್ಲಾ ಮಟ್ಟದ ವಿಜೇತರಾದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. ಈಗಾಗಲೇ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸ ಕಾರ್ಯಗಳ ಜೊತೆಗೆ ಕ್ರೀಡೆಯಲ್ಲಿ ಅನೇಕ ಸಾಧನೆ ಮಾಡಿದ್ದಾರೆ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿರುವ ಎಲ್ಲಾ ಸರ್ಕಾರಿ ನೌಕರರಿಗೆ ಶುಭಾಶಯಗಳನ್ನು ತಿಳಿಸಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕ್ರೀಡಾ ಜ್ಯೋತಿಯನ್ನು ಹಸ್ತಾಂತರ ಮಾಡಿದ ನಂತರ ಮಾತನಾಡಿ, ‘ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಸದೃಢತೆ ಕಾಪಾಡಿಕೊಳ್ಳಬೇಕು, ಎಲ್ಲರೂ ತಮ್ಮ ದಿನನಿತ್ಯದ ಜೀವನದಲ್ಲಿ ಯೋಗ, ಧ್ಯಾನ, ಕ್ರೀಡೆಯಂತಹ ಉತ್ತಮ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಳ್ಳಬೇಕು, ಇದರಿಂದ ವೃತ್ತಿಜೀವನದಲ್ಲಿ ಹಾಗೂ ವೈಯಕ್ತಿಕ ಜೀವನದಲ್ಲಿ ಸುಸ್ಥಿರರಾಗಿ ಕಾರ್ಯ ನಿರ್ವಹಿಸಬಹುದಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ನಾಗೇಶ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಉಪ ನಿರ್ದೇಶಕ ಓಂ ಪ್ರಕಾಶ್ ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕಿ ವರಲಕ್ಷ್ಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಕ.ರಾ‌.ಸ.ನೌ.ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಶಂಭುಗೌಡ, ಖಜಾಂಚಿ ಹೇಮಣ್ಣ ಹಾಗೂ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.