ADVERTISEMENT

ಮಂಡ್ಯ | 25 ಸಾವಿರ ಬಟ್ಟೆ ಬ್ಯಾಗ್‌ ವಿತರಿಸಿದ ಜಿಲ್ಲಾಡಳಿತ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 19:34 IST
Last Updated 11 ಮಾರ್ಚ್ 2020, 19:34 IST
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಟ್ಟೆ ಬ್ಯಾಗ್‌ ವಿತರಿಸಿದರು
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಟ್ಟೆ ಬ್ಯಾಗ್‌ ವಿತರಿಸಿದರು   

ಮಂಡ್ಯ: ‘ಪ್ಲಾಸ್ಟಿಕ್‌ ತ್ಯಜಿಸಿ, ಬಟ್ಟೆ ಬ್ಯಾಗ್‌ ಬಳಸಿ, ಪರಿಸರ ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾಡಳಿತವು ಬ್ಯಾಂಕ್‌ಗಳ ಸಹಯೋಗದಲ್ಲಿ ಸಾರ್ವಜನಿಕರಿಗೆ 25 ಸಾವಿರ ಬಟ್ಟೆ ಬ್ಯಾಗ್‌ ವಿತರಸುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಬುಧವಾರ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಚಾಲನೆ ನೀಡಿದರು.

‘ಪ್ಲಾಸ್ಟಿಕ್‌ ಮುಕ್ತ ನಗರ ನಿರ್ಮಾಣದತ್ತ ದಿಟ್ಟ ಹೆಜ್ಜೆ ಇಡಲಾಗುತ್ತಿದ್ದು ದೇಶದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಸಂಸ್ಥೆಗಳ ವತಿಯಿಂದ 25 ಸಾವಿರ ಬಟ್ಟೆ ಬ್ಯಾಗ್‌ ವಿತರಣೆ ಮಾಡಲಾಗುತ್ತಿದೆ. ವಿವಿಧ ಸಂಘಟನೆಗಳ 2 ಸಾವಿರ ಸ್ವಯಂಸೇವಕರು ನಗರದ ವಿವಿಧ ಬಡಾವಣೆ, ಕೊಳೆಗೇರಿಗಳಿಗೆ ತೆರಳಿ ಬ್ಯಾಗ್‌ ವಿತರಣೆ ಮಾಡಲಿದ್ದಾರೆ. ಜೊತೆಗೆ, ಪ್ಲಾಸ್ಟಿಕ್‌ನಿಂದ ಪರಸರಕ್ಕೆ ಉಂಟಾಗುವ ಮಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT