ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕಸಬಾ ಹೋಬಳಿ ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬಿದ್ದ ಬೆಂಕಿಯನ್ನು ನಂದಿಸಲು ಹೋಗಿದ್ದ ಜಯರಾಮು ಜ್ವಾಲೆಗೆ ಸಿಲುಕಿ ಮೃತಪಟ್ಟರು.
ಶನಿವಾರ ಮಧ್ಯಾಹ್ನ ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಬಿದ್ದಿರಬಹುದು ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರಗತಿಪರ ಕೃಷಿಕರಾಗಿದ್ದ ಜಯರಾಮ ಅವರನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ಸರ್ಕಾರವು ನೆರವಿಗೆ ಧಾವಿಸಬೇಕು’ ಎಂದು ದಲಿತ ಮುಖಂಡ ಡಿ. ಪ್ರೇಮಕುಮಾರ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.