
ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜ.26ರಂದು ಗಾಂಧಿ ಭವನ ಉದ್ಘಾಟನಾ ಸಮಾರಂಭವನ್ನು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಬಿ. ಹೊಸೂರು ಕಾಲೊನಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
‘ಗಾಂಧಿ ಭವನ’ ನಿರ್ಮಾಣವಾಗಿ ವರ್ಷ ಕಳೆದರೂ ಉದ್ಘಾಟನೆಯಾಗಿಲ್ಲ. ಈ ಭವ್ಯ ಕಟ್ಟಡ ನಿರುಪಯುಕ್ತವಾಗಿದ್ದು, ಅನಾಥ ಸ್ಥಿತಿಯಲ್ಲಿದೆ ಎಂಬ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಸೆ.21ರಂದು ವಿಶೇಷ ವರದಿ ಪ್ರಕಟವಾಗಿತ್ತು.
‘ವರದಿ ಕುರಿತು ಜಿಲ್ಲಾಧಿಕಾರಿ ಕುಮಾರ ಅವರೊಂದಿಗೆ ಚರ್ಚಿಸಿ, ಉದ್ಘಾಟನೆ ನೆರವೇರಿಸಲು ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಉದ್ಘಾಟನೆ ದಿನಾಂಕ ನಿಗದಿಪಡಿಸಿದ್ದಾರೆ. ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಭವ್ಯ ಕಟ್ಟಡ ಸಾರ್ವಜನಿಕರ ಬಳಕೆಗೆ ಸಿಗುವಂತಾಗಲಿ’ ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.