ADVERTISEMENT

ಮಂಡ್ಯ | ಸಾಕು ನಾಯಿ ಹೊತ್ತೊಯ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 3:59 IST
Last Updated 8 ಫೆಬ್ರುವರಿ 2026, 3:59 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಮಂಡ್ಯ: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ತಾಲ್ಲೂಕಿನ ಹುಲಿವಾನ ಗ್ರಾಮದಲ್ಲಿ ಶುಕ್ರವಾರ ನಡೆದಿದ್ದು ಜನರು ಭಯಭೀತಗೊಂಡಿದ್ದಾರೆ.

ಗ್ರಾಮದ ರಾಘು ಅವರ ಆಲೆಮನೆ ಸಮೀಪ ಶುಕ್ರವಾರ ತಡರಾತ್ರಿ ಚಿರತೆ ಪ್ರತ್ಯಕ್ಷಗೊಂಡಿದೆ. ನಂತರ ಆಲೆಮನೆ ಹತ್ತಿರ ಬಂದು ಸಾಕು ನಾಯಿಯನ್ನು ಕಚ್ಚಿ ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ADVERTISEMENT

ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಿರುವುದರಿಂದ ರೈತರು ತಮ್ಮ ಜಮೀನಿನ ಬಳಿ ಕೃಷಿ ಕಾರ್ಯ ಮಾಡಲು ಭಯ ಪಡುತ್ತಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಇರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.