
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಮಂಡ್ಯ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ಮಂಗಳವಾರ ನಡೆದಿದೆ.
ಆನೆಕೆರೆ ಬೀದಿ ನಿವಾಸಿ ಹೇಮಾ (40) ಕೊಲೆಯಾದವರು. ಈಕೆಯ ಪತಿ ಬೋರೇಗೌಡ ಕೊಲೆ ಆರೋಪಿ. ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಹಿಳೆ ಮೃತಪಟ್ಟಿರುವ ಬಗ್ಗೆ ದೊರೆತ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಆ ಸಂದರ್ಭದಲ್ಲಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬ ಅನುಮಾನದ ಮೇರೆಗೆ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
‘ಆ ವೇಳೆ ಬೋರೇಗೌಡ ತಾನೇ ಪತ್ನಿಯನ್ನು ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅದರಂತೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಖಚಿತ ಕಾರಣ ತಿಳಿದುಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.