ಮಂಡ್ಯ ಬೆಲ್ಲ
– ಪ್ರಜಾವಾಣಿ ಚಿತ್ರ
ಮಂಡ್ಯ: ‘87ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೋಂದಣಿಯಾಗುವ ಸದಸ್ಯರಿಗೆ ಮಂಡ್ಯ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕಾ ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಒ) ಘಟಕಗಳ ಸಭೆ ನಡೆಸಿ ಅವರು ಮಾತನಾಡಿದರು.
ಡಿ.20ರಿಂದ 22ರವರೆಗೆ ನಡೆಯಲಿರುವ ಸಮ್ಮೇಳನಕ್ಕೆ 10 ಸಾವಿರ ಮಂದಿ ನೋಂದಣಿಯಾಗುವ ನಿರೀಕ್ಷೆ ಇದೆ. ಪ್ರತಿನಿಧಿಗಳಿಗೆ ಹಾಗೂ ಗಣ್ಯರಿಗೆ ಅರ್ಧ ಕೆ.ಜಿ ಬೆಲ್ಲ ನೀಡಿದರೆ ಸುಮಾರು 6 ರಿಂದ 7 ಸಾವಿರ ಕೆ.ಜಿ ಬೆಲ್ಲ ಬೇಕಾಗುತ್ತದೆ. ಬೆಲ್ಲ ತಯಾರಿಕಾ ಘಟಕಗಳು ಉತ್ತಮವಾಗಿ ಪ್ಯಾಕೇಜ್ ಮಾಡಿ, ಅದರ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಮುದ್ರಣ ಮಾಡಿ ಕೊಡುವಂತೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.