ADVERTISEMENT

ಮಂಡ್ಯ: ಕನ್ನಡ ಶಾಲೆಯಲ್ಲಿ ಮಲಯಾಳ ಭಾಷೆ ಕಡ್ಡಾಯ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 5:43 IST
Last Updated 19 ಜನವರಿ 2026, 5:43 IST
ಕೇರಳ ಸರ್ಕಾರ ಕಾಸರಗೋಡಿನಲ್ಲಿನ ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಮಾಡುತ್ತಿರುವುದು ಖಂಡಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ಹಾಗೂ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕುಮಾರ ಅವರಿಗೆ ಮನವಿ ಪತ್ರ ನೀಡಿದರು 
ಕೇರಳ ಸರ್ಕಾರ ಕಾಸರಗೋಡಿನಲ್ಲಿನ ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಮಾಡುತ್ತಿರುವುದು ಖಂಡಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ಹಾಗೂ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕುಮಾರ ಅವರಿಗೆ ಮನವಿ ಪತ್ರ ನೀಡಿದರು    

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ಹಾಗೂ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ಮಾಡಿದರು.

ಕೇರಳ ಸರ್ಕಾರ ಕಾಸರಗೋಡಿನಲ್ಲಿನ ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಮಾಡುತ್ತಿರುವುದು ಖಂಡನೀಯ. ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗೆ ವಿಲೀನಗೊಳಿಸುವುದು ಹಾಗೂ ಬಾಂಗ್ಲಾ ದೇಶಿಗರು ಅಕ್ರಮ ಪ್ರವೇಶ ಮಾಡಿದ್ದು, ಅವರಿಗೆ ರಾಜ್ಯ ಸರ್ಕಾರ ಸೌಲಭ್ಯ ಒದಗಿಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾಷಿಗರು ಅಧಿಕ ಸಂಖ್ಯೆಯಲ್ಲಿರುವ ಕಾಸರಗೂಡು ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗಿತ್ತು. ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ಜಾರಿಗೆ ಬರಲಿಲ್ಲ. ಇದೀಗ ಕೇರಳ ಸರ್ಕಾರ ಮತ್ತದೇ ರೀತಿಯ ಗದಾಪ್ರಹಾರಕ್ಕೆ ಮುಂದಾಗಿರುವುದನ್ನು ಖಂಡಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್, ರಾಜ್ಯ ಸಹಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಸದಸ್ಯ ಆರಾಧ್ಯ ಗುಡಿಗೇನಹಳ್ಳಿ, ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಪ್ಪಾಜಿ, ಎಸ್.ಎಲ್. ಕೃಷ್ಣಮೂರ್ತಿ, ಜಯರಾಮು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.