
ಮಂಡ್ಯ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ವಿಸಿ ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರಾಜ್ಯ ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಇವರ ಸಹಯೋಗದೊಂದಿಗೆ ಡಿ. 5 ಮತ್ತು ಡಿ.6ರಂದು ಕೃಷಿ ಮೇಳ ಆಯೋಜಿಸಲಾಗಿದೆ.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಪಿ.ರವಿಕುಮಾರ್ , ಕದಲೂರು ಉದಯ್, ಎಚ್.ಟಿ ಮಂಜು ಭಾಗವಹಿಸುವರು
ಅಂಗವಿಕಲರ ದಿನಾಚರಣೆ ಇಂದು
ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಡಿ.3ರಂದು ಬೆಳಿಗ್ಗೆ 10.30ಕ್ಕೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಅಂಗವಿಕಲರ ದಿನಾಚರಣೆ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಶಾಸಕರಾದ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ ಉದಯ್, ಎಚ್.ಟಿ ಮಂಜು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.