ಮದ್ದೂರು: ‘ಮದ್ದೂರು ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಾಗ ಸ್ಥಳದಲ್ಲಿ ಕರ್ತವ್ಯದಲ್ಲಿ ಇಲ್ಲದ ಕಾರಣ ಮದ್ದೂರು ಪಟ್ಟಣ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಎಂಬುವರನ್ನು ಅಮಾನತು ಮಾಡಲಾಗಿದೆ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
‘ನಾಗಮಂಗಲ, ಮದ್ದೂರಿನಲ್ಲಿ ನಡೆದಂಥ ಗಲಭೆಗಳು ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲಿಯೂ ನಡೆಯಬಾರದು. ನಡೆದರೆ ನಿಮ್ಮನ್ನೇ ನೇರ ಹೊಣೆ ಮಾಡುತ್ತೇವೆ’ ಎಂದು ಸಚಿವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.