ADVERTISEMENT

ಮಂಡ್ಯ: ಮೈಷುಗರ್‌ ಎಂ.ಡಿ.ಯಾಗಿ ಮಂಗಲ್‌ ದಾಸ್‌ ನೇಮಕ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2025, 15:54 IST
Last Updated 9 ಏಪ್ರಿಲ್ 2025, 15:54 IST
ಮಂಗಲ್‌ ದಾಸ್‌ 
ಮಂಗಲ್‌ ದಾಸ್‌    

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

ಮಂಗಲ್‌ ದಾಸ್‌ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 

ಮಂಗಲ್ ದಾಸ್ ಅವರು ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದವರಾಗಿದ್ದು, ಏ.11ರಂದು ಮೈಷುಗರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಇದುವರೆಗೆ ಕೆಎಎಸ್‌ ಅಧಿಕಾರಿ ಬಿ.ಎನ್.ವೀಣಾ ಅವರು ಪ್ರಭಾರ ಎಂ.ಡಿ.ಯಾಗಿ ಕಾರ್ಯನಿರ್ವಹಿಸುತ್ತಿದ್ದರು.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.