ಕಿಕ್ಕೇರಿ (ಮಂಡ್ಯ ಜಿಲ್ಲೆ): ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಹೊರಗುತ್ತಿಗೆ ದಾಸ್ತಾನು ನಿರ್ವಾಹಕರಾಗಿದ್ದ ಕೆ.ಆರ್. ಪೇಟೆ ತಾಲ್ಲೂಕಿನ ವಳಗೆರೆಮೆಣಸ ಗ್ರಾಮದ ಕಾವ್ಯಾ (26) ಗುರುವಾರ ಕಚೇರಿಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ರದ್ದಾಗಿದ್ದಕ್ಕೆ ಅವರು ನೊಂದಿದ್ದರು ಎನ್ನಲಾಗಿದೆ.
15 ದಿನಗಳ ಹಿಂದೆ ಹಾಸನದ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ನಡೆದಿತ್ತು. ‘ಯುವಕ ಪದವೀಧರ ಹಾಗೂ ಉದ್ಯೋಗದಲ್ಲಿದ್ದಾನೆ ಎಂದು ಸುಳ್ಳು ಮಾಹಿತಿ ನೀಡಿದ್ದರು. ಈ ವಿಷಯ ಕಾವ್ಯಾ ಹಾಗೂ ಅವರ ಮನೆಯವರಿಗೆ ಗೊತ್ತಾಗಿದ್ದರಿಂದ ಮದುವೆಯನ್ನು ರದ್ದು ಮಾಡಿದ್ದರು. ಇದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕಿಕ್ಕೇರಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.