ಮಂಡ್ಯ: ‘ನಾಗಮಂಗಲ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಹಾಗೂ ಕಲ್ಲು ಗಣಿ ಗುತ್ತಿಗೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ಮೇ 31ರಂದು ನಾಗಮಂಗಲದಿಂದ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲಾಗುವುದು’ ಎಂದು ಅಖಿಲ ಕರ್ನಾಟಕ ಭೋವಿ ಯುವ ವೇದಿಕೆಯ ಮುಖಂಡ ಗೋವಿಂದರಾಜು ತಿಳಿಸಿದರು.
‘ನಾಗಮಂಗಲ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತಂತೆ ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ದೂರು ನೀಡಲಾಗಿತ್ತು. ಆದರೂ ಅಕ್ರಮ ತಡೆಯಲು ಸಾಧ್ಯವಾಗಿಲ್ಲ. ಗಣಿ ಗುತ್ತಿಗೆ ನೀಡುವಲ್ಲೂ ಅನ್ಯಾಯವಾಗುತ್ತಿದೆ. ಹೀಗಾಗಿ ಮೇ 31ರಂದು ಪಾದಯಾತ್ರೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಗೋಷ್ಠಿಯಲ್ಲಿ ವೇದಿಕೆಯ ದಕ್ಷಿಣ ಕರ್ನಾಟಕ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಜ್ವಲ್, ಮಂಜುನಾಥ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.