ADVERTISEMENT

ಸಾಮೂಹಿಕ ಅತ್ಯಾಚಾರ; ಮೂವರಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 15:12 IST
Last Updated 21 ಮಾರ್ಚ್ 2024, 15:12 IST
<div class="paragraphs"><p>ಜೈಲು(ಸಾಂದರ್ಭಿಕ ಚಿತ್ರ)</p></div>

ಜೈಲು(ಸಾಂದರ್ಭಿಕ ಚಿತ್ರ)

   

ಮಂಡ್ಯ: ಯುವತಿ ಮೇಲೆ ಎಸಗಿದ್ದ ಸಾಮೂಹಿಕ ಅತ್ಯಾಚಾರ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹ 50 ಸಾವಿರ ದಂಡ ವಿಧಿಸಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಮೈಸೂರಿ ಕಾಲೇಜೊಂದರಲ್ಲಿ ದ್ವಿತೀಯ ಬಿ.ಎ ವ್ಯಾಸಂಗ ಮಾಡುತ್ತಿದ್ದ ಯುವತಿ ಮೇಲೆ 2015ರಲ್ಲಿ ಪಾಂಡವಪುರ ತಾಲ್ಲೂಕು, ಬೇಬಿಬೆಟ್ಟದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಯುವತಿಯನ್ನು ಪ್ರೀತಿಸುತ್ತಿದ್ದ ಕೀರ್ತಿ ಗೌಡ ಎಂಬಾತ ಆಕೆಯನ್ನು ಕೆಆರ್‌ಎಸ್‌ಗೆ ಕರೆದುಕೊಂಡು ಬಂದಿದ್ದ. ನಂತರ ಬೇಬಿಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಸ್ಥಳಕ್ಕೆ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದ. ಕೀರ್ತಿಗೌಡ ನಂತರ ಕಿರಣ್‌ಗೌಡ, ಮೋಹನ್‌ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದರು.

ADVERTISEMENT

ನಂತರ ಯುವತಿ ಪೋಷಕರು ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಶ್ರೀರಂಗಪಟ್ಟಣದ ಉಪ ವಿಭಾಗದ ಡಿವೈಎಸ್‌ಪಿ ಪ್ರಧಾನ ಜಿಲ್ಲಾ ಸಿವಿಲ್‌ ನ್ಯಾಯಾಲಯಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಂತರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ₹ 50 ಸಾವಿರ ದಂಡ ವಿಧಿಸಿ ನ್ಯಾಯಾಧೀಶರಾದ ಕೆ.ನಿರ್ಮಲಾ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತೆಗೆ ₹ 2.80 ಪರಿಹಾರ ನೀಡಬೇಕು ಎಂದೂ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಸಿ.ರಾಮಲಿಂಗೇಗೌಡ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.