ADVERTISEMENT

ಮಂಡ್ಯ | ದೌರ್ಜನ್ಯ ಸಮಸ್ಯೆ ಶೀಘ್ರ ಪರಿಹರಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 5:00 IST
Last Updated 17 ಫೆಬ್ರುವರಿ 2026, 5:00 IST
<div class="paragraphs"><p>ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎಲ್‌. ಮೂರ್ತಿ ಅವರು ಸಭೆ ನಡೆಸಿದರು. ಜಿಲ್ಲಾಧಿಕಾರಿ ಕುಮಾರ, ಎಎಸ್ಪಿ ಗಂಗಾಧರಸ್ವಾಮಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್ ಪಾಲ್ಗೊಂಡಿದ್ದರು</p></div>

ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎಲ್‌. ಮೂರ್ತಿ ಅವರು ಸಭೆ ನಡೆಸಿದರು. ಜಿಲ್ಲಾಧಿಕಾರಿ ಕುಮಾರ, ಎಎಸ್ಪಿ ಗಂಗಾಧರಸ್ವಾಮಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್ ಪಾಲ್ಗೊಂಡಿದ್ದರು

   

ಮಂಡ್ಯ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕು ಎಂದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎಲ್‌. ಮೂರ್ತಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಸೋಮವಾರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 47 ದೌರ್ಜನ್ಯ ಪ್ರಕರಣಗಳು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದಲ್ಲಿ ದಾಖಲಾಗಿವೆ ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಕಾನೂನಾತ್ಮಕ ದೌರ್ಜನ್ಯ ಪ್ರಕರಣಗಳ ಗಂಭೀರ ತೊಡಕುಗಳನ್ನು ಬಗೆಹರಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳು ಮತ್ತು ನಗರಸಭೆಯ ಗಂಭೀರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು
ಶೀಘ್ರದಲ್ಲಿ ಪರಿಶೀಲಿಸಬೇಕು ಎಂದು ಸೂಚಿಸಿದರು. 

ರಾಜ್ಯದ 10 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಅಧಿಕಾರಿಗಳ ಜೊತೆ ಸಭೆ ನಡೆಸಿ ದೌರ್ಜನ್ಯ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಾದ ಕ್ರಮವಹಿಸುವಂತೆ ಸೂಚಿಸಿದ್ದಾರೆ. ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಸ್ಪಂದನೆ ಬಹಳ ಮುಖ್ಯ. ಜಿಲ್ಲೆಯು ಸರ್ವತೋಮುಖ ಅಭಿವೃದ್ಧಿಗೆ ಅಧಿಕಾರಿಗಳು ಶ್ರದ್ಧೆವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಅಹವಾಲು ಸ್ವೀಕಾರ: ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗಿನ ಸಭೆಯಲ್ಲಿ ಸಾರ್ವಜನಿಕರು ಮತ್ತು ಸಂಘ ಸಂಘಟನೆಗಳ ಅಹವಾಲು ಸ್ವೀಕರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ಸಹಾಯಕ ನಿರ್ದೇಶಕಿ ಕಾವ್ಯಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್ ಇದ್ದರು. 

ಸಾರ್ವಜನಿಕರಿಂದ ಅಹವಾಲು ಸ್ವೀಕಾರ 

ಅಸ್ಪೃಶ್ಯತೆ ಆಚರಣೆ ಸಮಾಜಕ್ಕೆ ಕಳಂಕ

ಅರಣ್ಯ ವಾಸಿಗಳ ಸಮಸ್ಯೆ ಬಗೆಹರಿಸಿ 

ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಪರಿಹರಿಸಬೇಕು. ಜಿಲ್ಲೆಯಲ್ಲಿ ಜಮೀನು ವಿಚಾರವಾಗಿ ದಾರಿ, ಸ್ಮಶಾನ, ಸರ್ವೆ ದುರಸ್ತಿ, ಪ್ರಕರಣಗಳನ್ನು ಶೀಘ್ರವಾಗಿ ಪರಿಶೀಲಿಸಬೇಕು.
ಎಲ್‌. ಮೂರ್ತಿ, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ

ಅರಿವು ಕಾರ್ಯಾಗಾರ  ಮಾರ್ಚ್‌ 7ಕ್ಕೆ

ಮಾರ್ಚ್ 7ರಂದು ಜಿಲ್ಲಾಡಳಿತ ವತಿಯಿಂದ ‘ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ’ಯ ಅರಿವು ಕಾರ್ಯಾಗಾರವನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರು ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕು ಎಂದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎಲ್‌. ಮೂರ್ತಿ ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಸ್ಪೃಶ್ಯತೆ ಆಚರಣೆಯು ಸಮಾಜಕ್ಕೆ ಕಳಂಕವಾಗಿದೆ. ಎಲ್ಲ ಮುಖಂಡರು ಮತ್ತು ಸಾರ್ವಜನಿಕರು ಅಸ್ಪೃಶ್ಯತೆ ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ. ಎಲ್ಲರೂ ಕಾರ್ಯಕ್ರಮದ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.