ADVERTISEMENT

ಮಂಡ್ಯ| ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಶೋಭಾರಾಣಿ ನೇಮಕ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 13:55 IST
Last Updated 31 ಡಿಸೆಂಬರ್ 2025, 13:55 IST
   

ಮಂಡ್ಯ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮೈಸೂರು ಜಿಲ್ಲೆ ಎಸ್ಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ತೆರವಾದ ಸ್ಥಾನಕ್ಕೆ ಬಳ್ಳಾರಿಯಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾರಾಣಿ ವಿ.ಜೆ. ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರು 2016ರ ಬ್ಯಾಚ್‌ನ ಅಧಿಕಾರಿಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಡಿವೈಎಸ್ಪಿ ಮತ್ತು ಹೆಚ್ಚುವರಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವವಿದೆ.

2016ರ ಐಪಿಎಸ್‌ ಬ್ಯಾಚ್‌ ಅಧಿಕಾರಿಯಾದ ಮಲ್ಲಿಕಾರ್ಜುನ ಬಾಲದಂಡಿ ಅವರು ರೌಡಿಸಂ ಕೃತ್ಯಗಳ ನಿಯಂತ್ರಣ, ರೌಡಿಗಳ ಗಡೀಪಾರು, ಅಪರಾಧ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2024ರ ಜುಲೈ 3ರಂದು ಮಂಡ್ಯ ಎಸ್ಪಿಯಾಗಿ ವರ್ಗಾವಣೆಗೊಂಡು, ಕಳೆದ ಒಂದೂವರೆ ವರ್ಷದಿಂದ ಇಲಾಖೆಯನ್ನು ‘ಜನಸ್ನೇಹಿ ಪೊಲೀಸ್‌’ ಮಾಡುವಲ್ಲಿ ಶ್ರಮಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.