
ಸಾವು
(ಪ್ರಾತಿನಿಧಿಕ ಚಿತ್ರ)
ಶ್ರೀರಂಗಪಟ್ಟಣ: ತಾಲ್ಲೂಕಿನ ಮಂಡ್ಯಕೊಪ್ಪಲು ಸಮೀಪ ರಾಮಸ್ವಾಮಿ ನಾಲೆಯಲ್ಲಿ ಶನಿವಾರ ಸಂಜೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮೈಸೂರಿನ ಮೂವರು ವಿದ್ಯಾರ್ಥಿಗಳ ಮೃತದೇಹಗಳು ಭಾನುವಾರ ಪತ್ತೆಯಾಗಿವೆ. ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.
ಮೈಸೂರಿನ ಉದಯಗಿರಿಯ ಹಾಜಿರ ನಿಶ್ವಾನ್ ಅರೇಬಿಕ್ ಶಾಲೆಯ ತರ್ಬೀನ್ (13) ಮತ್ತು ಅಫ್ರೀನ್ (13) ಅವರ ಮೃತದೇಹಗಳು 20 ಕಿ.ಮೀ. ದೂರದಲ್ಲಿ ಅಂದರೆ, ತಿ.ನರಸೀಪುರ ತಾಲ್ಲೂಕಿನ ಸೋಸಲೆ ಬಳಿ ಸಿಕ್ಕಿವೆ. ಉಮೆ ಹನಿ (14) ಮೃತದೇಹ ಘಟನಾ ಸ್ಥಳದಿಂದ ಒಂದು ಕಿ.ಮೀ. ಅಂತರದಲ್ಲಿ ಪತ್ತೆಯಾಗಿದೆ.
ಆಟವಾಡಲು ನೀರಿಗಿಳಿದಿದ್ದ ಆರು ವಿದ್ಯಾರ್ಥಿಗಳ ಪೈಕಿ, ಸ್ಥಳೀಯರು ರಕ್ಷಿಸಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆಯೇಷಾ (13) ಮೈಸೂರಿನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದರು. ಆಲ್ಬಿಯಾ ಮತ್ತು ಮಹಮದ್ ಗೌಸ್ ಎಂಬ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.