ADVERTISEMENT

ನಾಲ್ವಡಿ, ಕೆಂಪೇಗೌಡರ ಕೊಡುಗೆ ಅಪಾರ: ಸಚಿವ ಎನ್. ಚೆಲುವರಾಯಸ್ವಾಮಿ

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ: ಸಚಿವ ಚಲುವರಾಯಸ್ವಾಮಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 14:35 IST
Last Updated 27 ಜೂನ್ 2025, 14:35 IST
<div class="paragraphs"><p>ಮಂಡ್ಯ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 516ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. </p></div>

ಮಂಡ್ಯ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 516ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

   

ಮಂಡ್ಯ: ‘ಕರ್ನಾಟಕದ ಅತಿ ಹೆಚ್ಚು ಜನಸಂದಣಿ ಹಾಗೂ ಅಭಿವೃದ್ಧಿ ಹೊಂದಿರುವ ನಗರ ಬೆಂಗಳೂರು. ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣ ನಾಡಪ್ರಭು ಕೆಂಪೇಗೌಡರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು.

ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 516ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ADVERTISEMENT

ಮಂಡ್ಯ ಹಳೇ ಮೈಸೂರಿನ ಭಾಗಗಳಲ್ಲಿ ಶೈಕ್ಷಣಿಕ, ಆರೋಗ್ಯ, ಮೀಸಲಾತಿಯ ವಿಚಾರಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ಮೀರಿಸಲು ಯಾರಿಂದಲೂ ಸಾಧ್ಯವಿಲ್ಲ. ನಾವು ಅವರು ನೀಡಿರುವ ಕೊಡುಗೆಗಳನ್ನು ಉಳಿಸಿಕೊಂಡು ಹೋಗಬೇಕಿದೆ. ₹100 ಕೋಟಿ ವೆಚ್ಚದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲಾಗುವುದು, ಮೈಷುಗರ್ ಕಾರ್ಖಾನೆಗೆ ₹25 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಶೀಘ್ರದಲ್ಲಿಯೇ ಹಣ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಮಾತನಾಡಿದರು. ಇತಿಹಾಸ ಪ್ರಾಧ್ಯಾಪಕ ಬಿ.ಪಾಂಡು ಕುಮಾರ್ ವಿಶೇಷ ಉಪನ್ಯಾಸ ನೀಡಿದರು. 

ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಜಿಲ್ಲೆಯ ಮೊಡಚಾಕನಹಳ್ಳಿಯ ಎಂ.ಆರ್. ನಿಖಿಲ್ ಹಾಗೂ ಹಳೆಬೂದನೂರಿನ ಮನೋಜ್ ಹೆಚ್.ಪಿ ರವರಿಗೆ ಮತ್ತು ಇತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು.

ಸಭೆಯಲ್ಲಿ ಮುಡಾ ಅಧ್ಯಕ್ಷ ನಹೀಂ, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ನಗರಸಭೆ ಉಪಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಜಯರಾಮ್ ಮುಂತಾದವರು ಪಾಲ್ಗೊಂಡಿದ್ದರು. 

ಮೈಷುಗರ್ ಕಾರ್ಖಾನೆಗೆ ₹25 ಕೋಟಿ ಅನುದಾನಕ್ಕೆ ಬೇಡಿಕೆ ₹100 ಕೋಟಿ ವೆಚ್ಚದಲ್ಲಿ ಕೃಷಿ ವಿವಿ ಅಭಿವೃದ್ಧಿ

2 ವರ್ಷಗಳಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಸಚಿವ ಚಲುವರಾಯಸ್ವಾಮಿಯವರು ₹4 ಸಾವಿರ ಕೋಟಿ ಅನುದಾನ ತಂದಿದ್ದಾರೆ. ಅವರನ್ನು ‘ಮಂಡ್ಯದ ನಿರ್ಮಾತೃ’ ಎಂದರೆ ತಪ್ಪಾಗಲಾರದು

- ಪಿ.ರವಿಕುಮಾರ್ ಮಂಡ್ಯ ಶಾಸಕ

ಮೆರವಣಿಗೆ ಮೆರುಗು ತಂದ ಡೊಳ್ಳು ವರ್ಣರಂಜಿತ ರಥದ ಮೇಲೆ ಇರಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕುಮಾರ ಹಾಗೂ ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ನಗಾರಿ ಬಾರಿಸುವ ಮೂಲಕ ಮೆರವಣಿಗೆಗೆ ಅದ್ದೂರಿ ಚಾಲನೆ ನೀಡಿದರು. ಪೂರ್ಣ ಕುಂಭ ಹೊತ್ತ ಮಹಿಳೆಯರು ಕಹಳೆ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಮೈಸೂರು ಬೆಂಗಳೂರು ಹೆದ್ದಾರಿಯ ಮುಖಾಂತರ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದವರೆಗೂ ಮೆರವಣಿಗೆ ತಲುಪಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.