ADVERTISEMENT

ಮದ್ದೂರು ಗಲಭೆ: 7 ಆರೋಪಿಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 5:09 IST
Last Updated 13 ಸೆಪ್ಟೆಂಬರ್ 2025, 5:09 IST
ವಿಶೇಷ ಕಾರ್ಯಪಡೆಯ ಸಿಬ್ಬಂದಿ ತರಬೇತಿಯ ಬಳಿಕ ಮಂಗಳೂರಿನಲ್ಲಿ ಗಲಭೆ ನಿಯಂತ್ರಣ ಪ್ರಾತ್ಯಕ್ಷಿಕೆಯನ್ನು ಬುಧವಾರ ನಡೆಸಿಕೊಟ್ಟರು
ವಿಶೇಷ ಕಾರ್ಯಪಡೆಯ ಸಿಬ್ಬಂದಿ ತರಬೇತಿಯ ಬಳಿಕ ಮಂಗಳೂರಿನಲ್ಲಿ ಗಲಭೆ ನಿಯಂತ್ರಣ ಪ್ರಾತ್ಯಕ್ಷಿಕೆಯನ್ನು ಬುಧವಾರ ನಡೆಸಿಕೊಟ್ಟರು   

ಮಂಡ್ಯ: ಮದ್ದೂರು ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿ ನ್ಯಾಯಾಂಗ ವಶದಲ್ಲಿದ್ದ 22 ಆರೋಪಿಗಳಲ್ಲಿ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಸೆ.7ರ ರಾತ್ರಿ ಗಣೇಶನ ಮೂರ್ತಿಯ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ್ದ 29 ಆರೋಪಿಗಳಲ್ಲಿ 22 ಮಂದಿಯನ್ನು ಪೊಲೀಸರು ಅದೇ ದಿನ ರಾತ್ರಿ ಬಂಧಿಸಿ, ಮರು ದಿನವೇ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.

ವಿಡಿಯೊ, ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿದ ಆರೋಪಿಗಳ ಗುರುತು ಪತ್ತೆ ಮಾಡಿ ಬಂಧಿಸಲಾಗಿತ್ತು. ಇದೀಗ ಪ್ರಕರಣದ ಸಮಗ್ರ ವಿಚಾರಣೆಗಾಗಿ ಆರೋಪಿಗಳ ಪೈಕಿ 7 ಮಂದಿಯನ್ನು ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಈಗ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಕೃತ್ಯದ ಹಿಂದಿನ ಕಾರಣ ತಿಳಿಯಲು ಮುಂದಾಗಿದ್ದಾರೆ. ಜತೆಗೆ ಸಾಕ್ಷಿ ಸಂಗ್ರಹ ಕಾರ್ಯವೂ ನಡೆದಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.