ADVERTISEMENT

ಮಂಡ್ಯ: ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

​ಪ್ರಜಾವಾಣಿ ವಾರ್ತೆ
Published 10 ಮೇ 2025, 14:34 IST
Last Updated 10 ಮೇ 2025, 14:34 IST
<div class="paragraphs"><p>ಹಲ್ಲೆ</p></div>

ಹಲ್ಲೆ

   

(ಪ್ರಾತಿನಿಧಿಕ ಚಿತ್ರ)

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಯುವಕರ ಗುಂಪು ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ.

ADVERTISEMENT

ಉದಯಗಿರಿ ಬಡಾವಣೆಯ ಕಿರಣ್ ಅಲಿಯಾಸ್ ಮರಿಕೆರೆ (26) ಎಂಬಾತ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತೆಯಲ್ಲಿ ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾನೆ.

ಈತನ ಮೇಲೆ ನಗರದ ವರ್ಧನ್, ವರುಣ್, ಮನು, ಗೋವಿಂದರಾಜು, ಮದನ್ ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ.

ಕಿರಣ್ ಮತ್ತು ವರ್ಧನ್ ಇಬ್ಬರೂ ನಗರದಲ್ಲಿ ತಳ್ಳುವ ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ಆಗಾಗ್ಗೆ ಸಣ್ಣ ಪುಟ್ಟ ವಿಚಾರಕ್ಕೆ ಇಬ್ಬರ ನಡುವೆ ಜಗಳ ಆಗಿತ್ತು. ಕಿರಣ್ ಇತ್ತೀಚೆಗೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದ. ಕಳೆದ ಎರಡು ಮೂರು ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ.

ಮತ್ತೆ ಗಲಾಟೆ ಮಾಡಿಕೊಂಡಿದ್ದ ಕಿರಣನನ್ನು ಹತ್ಯೆ ಮಾಡಲು ವರ್ಧನ್ ಯೋಜನೆ ರೂಪಿಸಿದ್ದ. ಅದರಂತೆ ಗೋದಾಮಿನಲ್ಲಿ ಮಲಗಿದ್ದ ಕಿರಣ್ ಮೇಲೆ ವರ್ಧನ್ ಮತ್ತು ಇತರರು ಮಚ್ಚು, ಲಾಂಗುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಕಿರಣನಿಗೆ ಊಟ ಕೊಡಲು ಬಂದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುವನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. 

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ತಿಮ್ಮಯ್ಯ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.