
ಮಂಡ್ಯ: ‘ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಗಳ ಇಲಾಖೆಯ ವಸತಿ ನಿಲಯಗಳಲ್ಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ರಾತ್ರಿ ತರಗತಿ ನಡೆಸುವ ಮೂಲಕ ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಅವರು ವಾರ್ಡನ್‌ಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಗಳ ಇಲಾಖೆಯ ಎಲ್ಲ ವಸತಿ ನಿಲಯಗಳ ವಾರ್ಡನ್‌ಗಳಿಗೆ ಏರ್ಪಡಿಸಿದ್ದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲ ವಾರ್ಡನ್‌ಗಳು ಕಡ್ಡಾಯವಾಗಿ ವಸತಿ ನಿಲಯಗಳಲ್ಲಿ ವಾಸ್ತವ್ಯವಿರಬೇಕು. ಪ್ರತಿದಿನ ರಾತ್ರಿ ಮತ್ತು ಬೆಳಿಗ್ಗೆ ಹತ್ತನೇ ತರಗತಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಜಿ.ಪಿ.ಎಸ್ ಫೋಟೋವನ್ನು ಕಡ್ಡಾಯವಾಗಿ ವಾಟ್ಸ್‌ಆ್ಯಪ್ ಮೂಲಕ ಕಳುಹಿಸುವಂತೆ ಸೂಚಿಸಿದರು.
ಪೂರ್ವ ಸಿದ್ಧತಾ ಪರೀಕ್ಷೆ-2ರಲ್ಲಿ ವಸತಿ ನಿಲಯಗಳಲ್ಲಿನ 438 ವಿದ್ಯಾರ್ಥಿಗಳ ಪೈಕಿ 370 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 68 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಮುಂದಿನ 18 ದಿನಗಳಲ್ಲಿ ಹಾಸ್ಟೆಲ್‌ಗಳ ಎಲ್ಲ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ವಾರ್ಡನ್‌ಗಳು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಹಾಸ್ಟೆಲ್‌ಗೆ ಭೇಟಿ:
ಮಂಡ್ಯ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಸಿಇಒ ನಂದಿನಿ ಅವರು ವಿದ್ಯಾರ್ಥಿಗಳಿಗೆ ರಾತ್ರಿ ತರಗತಿ ನಡೆಸುತ್ತಿರುವ ಕುರಿತು ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಜಿ, ಡಯಟ್ ಪ್ರಾಂಶುಪಾಲ ಯೋಗೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲೆಯ ಎಲ್ಲಾ ಹಾಸ್ಟೆಲ್ ವಾರ್ಡನ್ ಗಳು ಹಾಜರಿದ್ದರು.
ವಾರ್ಡನ್‌ಗಳು ಹಾಸ್ಟೆಲ್‌ನಲ್ಲೇ ವಾಸ್ತವ್ಯವಿರಬೇಕು ಅನುತ್ತೀರ್ಣರಾದ 68 ವಿದ್ಯಾರ್ಥಿಗಳತ್ತ ಗಮನಹರಿಸಿ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಸಿಇಒ ಸಂವಾದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.