ಸಿ.ಡಿ.ಗಂಗಾಧರ್
ಮಂಡ್ಯ: ಮಂಡ್ಯ ಹಾಲು ಒಕ್ಕೂಟದ ಚುನಾವಣೆಯಲ್ಲಿ ಸಹಕಾರಿ ಕ್ಷೇತ್ರದ ಮತದಾರರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ದೂರವಿಟ್ಟು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ ಹೇಳಿದರು.
ವಿರೋಧ ಪಕ್ಷಗಳು ಸೇರಿದಂತೆ ಕಾಂಗ್ರೆಸ್ ವಿರೋಧಿಗಳು ತಮ್ಮ ಹೇಳಿಕೆಯಲ್ಲಿ ಡೆಡ್ ಹಾರ್ಸ್, ಜಸ್ಟ್ ಪಾಸ್ ಎಂದು ನಮ್ಮ ಪಕ್ಷವನ್ನು ಮೂದಲಿಸುತ್ತಿದ್ದರು. ಇವೆಲ್ಲ ನಿಲ್ಲಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಒತ್ತಾಯಿಸಿದರು.
ಮನ್‌ಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಹೆಚ್ಚಿನ ಮಟ್ಟದ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅವರ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಲೋಕಸಭಾ ಚುನಾವಣೆಯ ನಂತರದ ನಡೆದ ಜಿಲ್ಲಾ ಮಟ್ಟದ ಚುನಾವಣೆಯಲ್ಲಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ, ಮೈಷುಗರ್ ಕಾರ್ಖಾನೆಗೆ ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಶೀರ್ವಾದ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರಾದ ಶ್ರೀಧರ್, ವಿಜಯಕುಮಾರ್, ನಾಗರಾಜ್, ಉದಯ್, ರುದ್ರಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.