
ಪ್ರಜಾವಾಣಿ ವಾರ್ತೆ
ಬಂಧನ
ಬೆಳಕವಾಡಿ: ಸಮೀಪದ ಮಡವಾಡಿ ರಸ್ತೆಯಲ್ಲಿ ಎರಡು ಕಡೆ ಇಬ್ಬರು ವ್ಯಕ್ತಿಗಳು ಕುಳಿತು ಗಾಂಜಾ ಸೇವನೆ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಟಿ.ನರಸೀಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದ ಅರುಣಗಿರಿ ಮತ್ತು ಮಳವಳ್ಳಿ ತಾಲ್ಲೂಕಿನ ಉಪ್ಪಲಗೇರಿ ಕೊಪ್ಪಲು ಗ್ರಾಮದ ಮುತ್ತುರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ.
ಸಿಗರೇಟುಗಳಿಗೆ ಗಾಂಜಾ ಸೊಪ್ಪು ಹಾಕಿ ಸೇವಿಸುತ್ತಿದ್ದಾಗ ಆರೋಪಿಗಳನ್ನು ಪಿಎಸ್ಐ ಬಿ.ವಿ. ಪ್ರಕಾಶ್ ತಂಡ ದಾಳಿ ಮಾಡಿ ಮಂಗಳವಾರ ವಶಕ್ಕೆ ಪಡೆಯಿತು. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.