ADVERTISEMENT

ಮೇಲುಕೋಟೆ: 20ರಂದು ಪುತಿನ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 4:47 IST
Last Updated 14 ಅಕ್ಟೋಬರ್ 2025, 4:47 IST
ಮೇಲುಕೋಟೆಯ ಪು.ತಿನ ಕಲಾಮಂದಿರದಲ್ಲಿ ಸೋಮವಾರ ಸಾಂಕೇತಿಕವಾಗಿ ನಡೆದ ಪುತಿನ ಸಂಸ್ಮರಣೆಯ ಕವಿ ಪುತಿನ ಪ್ರತಿಮೆಗೆ ಗ್ರಾ.ಪಂ ಪ್ರಭಾರ ಅಧ್ಯಕ್ಷ ಜಿ.ಕೆ. ಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ  ಡಾ.ಬಿ.ವಿನಂದೀಶ್, ಮಾಲಾರ್ಪಣೆ ಮಾಡಿದರು
ಮೇಲುಕೋಟೆಯ ಪು.ತಿನ ಕಲಾಮಂದಿರದಲ್ಲಿ ಸೋಮವಾರ ಸಾಂಕೇತಿಕವಾಗಿ ನಡೆದ ಪುತಿನ ಸಂಸ್ಮರಣೆಯ ಕವಿ ಪುತಿನ ಪ್ರತಿಮೆಗೆ ಗ್ರಾ.ಪಂ ಪ್ರಭಾರ ಅಧ್ಯಕ್ಷ ಜಿ.ಕೆ. ಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ  ಡಾ.ಬಿ.ವಿನಂದೀಶ್, ಮಾಲಾರ್ಪಣೆ ಮಾಡಿದರು   

ಮೇಲುಕೋಟೆ: ಕವಿ ಪು.ತಿ.ನ ಸಂಸ್ಮರಣೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಪು.ತಿ.ನ ಕಾರ್ಯಕ್ರಮದ ಉದ್ಘಾಟನೆಯನ್ನು ಅ.20ರಂದು ಸೋಮವಾರ ಮೇಲುಕೋಟೆಯ ಪುತಿನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ತಿಳಿಸಿದರು

ಮೇಲುಕೋಟೆಯಲ್ಲಿ ಕವಿಯ ಪುಣ್ಯಸ್ಮರಣೆಯ ಕಾರ್ಯಕ್ರಮದ ವಿವರ ನೀಡಿದ ಅವರು, ‘ಪು.ತಿ.ನ ಪುಣ್ಯಸ್ಮರಣೆ ನಿಮಿತ್ತ ಅ.13ರಂದು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಾಂಕೇತಿಕವಾಗಿ ಆಚರಿಸಲಾಗಿದೆ. ಕಲಾಮಂದಿರದಲ್ಲಿ ತಿಂಗಳಿಗೆ ಒಂದು ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು’ ಎಂಬುದು ನಮ್ಮ ಆಶಯವಾಗಿದೆ’ ಎಂದರು

ಅ.20ರಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಉಪವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್, ಪು.ತಿ.ನ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ ಕೃಷ್ಣೇಗೌಡ, ಕೆ.ಎಸ್.ನ ಟ್ರಸ್ಟ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಮೀರಾಶಿವಲಿಂಗಯ್ಯ. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ ಜಯಪ್ರಕಾಶಗೌಡ, ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಪ್ರಕಾಶ್ ಮೇನಾಗರ ಹಾಗೂ ಭಾಗವಹಿಸಲಿದ್ದಾರೆ

ADVERTISEMENT

ಪು.ತಿ.ನ ಪ್ರತಿಮೆಗೆ ಮಾಲಾರ್ಪಣೆ ನಂತರ ಕಾರ್ಯಕ್ರಮ ಆರಂಭವಾಗಲಿದ್ದು, ಶಾಲಾ-ಕಾಲೇಜುಗಳಲ್ಲಿ ಪುತಿನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದರು.

ಪುತಿನ ಪ್ರತಿಮೆಗೆ ಗ್ರಾ.ಪಂ ಪ್ರಭಾರ ಅಧ್ಯಕ್ಷ ಜಿ.ಕೆ. ಕುಮಾರ್, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್, ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಸ್ಥಾನೀಕಂ ಸಂತಾನರಾಮನ್, ಪು.ತಿ.ನ ಕಲಾಮಂದಿರ ವ್ಯವಸ್ಥಾಪಕ ವೆಂಕಟೇಶ್, ರಂಗನಿರ್ದೇಶಕ ದೃಶ್ಯಗಿರೀಶ್, ಶಿಕ್ಷಕ ಕೃಷ್ಣಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.