ADVERTISEMENT

‘ನರೇಗಾ’ ಮುಂದುವರಿಸಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 5:37 IST
Last Updated 7 ಜನವರಿ 2026, 5:37 IST
‘ನರೇಗಾ ಯೋಜನೆ’ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು
‘ನರೇಗಾ ಯೋಜನೆ’ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು   

ಮಂಡ್ಯ: ‘ನರೇಗಾ’ ಯೋಜನೆಯನ್ನು ‘ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಆಜೀವಿಕಾ ಮಿಷನ್‌’(ವಿಬಿ ಜಿ ರಾಮ್‌ ಜಿ)’ ಎಂದು  ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಜಿಲ್ಲಾಧಿಕಾರಿ ಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು. 

2004-2005ರಲ್ಲಿ ಎಡಪಕ್ಷಗಳ ಬೆಂಬಲದ ಮೇಲೆ ಆಧಾರವಾಗಿದ್ದ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿತ್ತು. ಈ ಕಾಯ್ದೆ ಗ್ರಾಮೀಣ ಭಾಗದ ಕೃಷಿ ಕೂಲಿಕಾರರು, ಬಡ ರೈತರು ಹಾಗೂ ಇನ್ನಿತರ ಗ್ರಾಮೀಣ ದುಡಿಮೆಗಾರರಲ್ಲಿ ಶೇ 30ರಷ್ಟು ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿದ್ದರು. ಆದರೆ ಇದನ್ನು ಬುಡಮೇಲು ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಡೆ ಖಂಡನೀಯವಾದುದು ಎಂದು ಕಿಡಿಕಾರಿದರು.

ADVERTISEMENT

ಈ ಹೊಸ ಕಾಯ್ದೆಯಿಂದ ಕೂಲಿಕಾರರ ಮೇಲೆ ಹಲವು ದುಷ್ಪರಿಣಾಮಗಳು ಬೀರುತ್ತವೆ. ಕೇಂದ್ರ ಸರ್ಕಾರ ಶೇ 60, ರಾಜ್ಯ ಸರ್ಕಾರ ಶೇ 40ರಷ್ಟು ಮೊತ್ತವನ್ನು ಖರ್ಚು ಮಾಡಬೇಕೆಂಬ ಅಂಶಗಳಿಂದ ಕೂಲಿ ಕಾರ್ಮಿಕರನ್ನು ಕೂಲಿಯಿಂದ ವಂಚಿತರಾಗಿ ಮಾಡುತ್ತದೆ. ಈ ಹೊಸ ಪದ್ಧತಿ ಕಾಯ್ದೆಯು ಉದ್ಯೋಗ ಖಾತ್ರಿಯನ್ನು ಮುಂದಿನ ದಿನಗಳಲ್ಲಿ ತೆಗೆದುಹಾಕುವ ಹುನ್ನಾರ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು, ಜಿಲ್ಲಾ ಘಟಕದ ಅಧ್ಯಕ್ಷ ಶಿವಮಲ್ಲಯ್ಯ, ಉಪಾಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಮುಖಂಡರಾದ ಟಿ.ಎಲ್‌.ಕೃಷ್ಣೇಗೌಡ, ಅನಿತಾ, ಶುಭವತಿ, ಆನಂದ್, ಅರುಣ್‌ಕುಮಾರ್,  ಅಮಾಸಯ್ಯ, ಅಬ್ದುಲ್, ರಾಮಯ್ಯ, ವೈ.ಎಸ್‌.ಶೋಭಾ ಭಾಗವಹಿಸಿದ್ದರು.

‘ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸಿ’

2005ರಲ್ಲಿ ಇದ್ದ ಕಾಯ್ದೆಯನ್ನು ಮುಂದುವರಿಸಲು ಮತ್ತು ದಿನಕ್ಕೆ ₹600 ಕೂಲಿ 200 ಮಾನವ ದಿನ ಕೆಲಸ ನೀಡಬೇಕು. ನರೇಗಾದಲ್ಲಿ ಯಂತ್ರಗಳನ್ನು ಬಳಸಬಾರದು. ಮಾನವ ದಿನಗಳ ಮೂಲಕ ಉದ್ಯೋಗ ಸೃಷ್ಟಿಸಲು ಕಾನೂನು ಇತ್ತು. ಈ ಹೊಸ ಕಾಯ್ದೆಯಿಂದ ಯಂತ್ರಗಳನ್ನು ಬಳಸಿ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಅಂಶಗಳನ್ನು ಒಳಗೊಂಡಿದೆ. ಆದ್ದರಿಂದ ಕೂಲಿಕಾರರಿಗೆ ಕೂಲಿ ದಿನಗಳು ಸಿಗದಂತೆ ಆಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.