ADVERTISEMENT

ಮಂಡ್ಯ | ಬಿಸಿಯೂಟ: ಮೊಟ್ಟೆ ವಿರೋಧಿಸಿ ಟಿ.ಸಿ ಪಡೆದ 84 ಮಕ್ಕಳು

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 23:30 IST
Last Updated 13 ಆಗಸ್ಟ್ 2025, 23:30 IST
ಮೊಟ್ಟೆ
ಮೊಟ್ಟೆ   

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಕೊಡುವುದನ್ನು ವಿರೋಧಿಸಿದ ಪೋಷಕರು, 84 ಮಕ್ಕಳ ವರ್ಗಾವಣೆ ಪತ್ರ ಪಡೆದಿದ್ದು, ಅಕ್ಕಪಕ್ಕದ ಕೀಲಾರ, ಹನಕೆರೆ, ಬೆಸಗರಹಳ್ಳಿ ಸರ್ಕಾರಿ ಶಾಲೆಗೆ ದಾಖಲಿಸಿದ್ದಾರೆ.  

ಎಲ್‌ಕೆಜಿ, ಯುಕೆಜಿ ಸೇರಿ 144 ಮಕ್ಕಳಿರುವ ಶಾಲೆಯ ಬಳಿ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ದೇವಾಲಯವಿದೆ ಎಂಬ ಕಾರಣಕ್ಕೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿತ್ತು.

‘ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂಬ ಕೆಲ ಪೋಷಕರ ಮಾತಿಗೆ ಇತರೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಮನವೊಲಿಸುವ ಅಧಿಕಾರಿಗಳ ಪ್ರಯತ್ನ ಫಲ ನೀಡಿಲ್ಲ’ ಎಂದು ಮುಖಂಡ ಮಹೇಶ್‌ ಹೇಳಿದರು.

ADVERTISEMENT

‘ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ದೇವಾಲಯ ಇರುವುದರಿಂದ ಕೊಡಬಾರದು, ಮನೆಗೇ ಕೊಟ್ಟು ಕಳುಹಿಸಲಿ ಎಂದಿದ್ದೆವು. ಬೇಯಿಸಿ ಕೊಡಬೇಕು ಎಂದು ಕೆಲವರು ಪಟ್ಟುಹಿಡಿದಿದ್ದರು. ಆಚಾರ ವಿಚಾರಕ್ಕೆ ಅಡೆತಡೆ ಆಗುತ್ತದೆಂದು ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದೆವು’ ಎಂದು ಎಸ್‌ಡಿಎಂಸಿ ಸದಸ್ಯ ಚಂದ್ರು ಆಲಕೆರೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.