ADVERTISEMENT

ಮಂಡ್ಯ | ಬಾಲಕಿ ನಿಗೂಢ ಸಾವು: ತನಿಖಾ ತಂಡ ರಚನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 23:30 IST
Last Updated 2 ಜೂನ್ 2025, 23:30 IST
<div class="paragraphs"><p>ಆಸ್ಪತ್ರೆ</p></div>

ಆಸ್ಪತ್ರೆ

   

Credit: iStock Photo

ಮಂಡ್ಯ: ಮಳವಳ್ಳಿ ತಾಲ್ಲೂಕು ನೆಲ್ಲೂರಿನ ಬಾಲಕಿ ಸಾನ್ವಿ (7) ಇಲ್ಲಿನ ಮಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟ ಬಗ್ಗೆ ಶಂಕೆಗಳು ವ್ಯಕ್ತವಾಗಿರುವುದರಿಂದ ನಿಖರ ಕಾರಣ ತಿಳಿದುಕೊಳ್ಳಲು ತಜ್ಞರ ಸಮಿತಿ ರಚಿಸಿ, ತನಿಖೆಗೆ ಜಿಲ್ಲಾಧಿಕಾರಿ ಕುಮಾರ ಆದೇಶಿಸಿದ್ದಾರೆ.   

ADVERTISEMENT

‘ಕಾಲಿನ ಮೇಲೆ ಟೈಲ್ಸ್‌ ಬಿದ್ದು ಗಾಯಗೊಂಡಿದ್ದ ಬಾಲಕಿಗೆ ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮೃತಪಟ್ಟಳು’ ಎಂದು ಪೋಷಕರು ಮತ್ತು ಸಂಬಂಧಿಕರು ಆರೋಪಿಸಿದ್ದರು. ಮಿಮ್ಸ್‌ ಆವರಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. 

ತನಿಖಾ ಸಮಿತಿಯಲ್ಲಿ ಮೈಸೂರು ವೈದ್ಯಕೀಯ ಕಾಲೇಜಿನ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಪ್ರದೀಪ್ ಅಧ್ಯಕ್ಷರಾಗಿ, ನಾಗಮಂಗಲ ತಾಲ್ಲೂಕಿನ ಬಿ.ಜಿ. ನಗರದಲ್ಲಿರುವ ಮೂಳೆ ಮತ್ತು ಕೀಲು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಹೇಶ್, ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಬಾಲಕೃಷ್ಣ, ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ.ಚೇತನ್‌ ಸದಸ್ಯರಾಗಿದ್ದಾರೆ. ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸೋಮಶೇಖರ್ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ತನಿಖಾ ವರದಿಯನ್ನು 15 ದಿನದೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.