ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ಜಯಕುಮಾರ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು
ಕೆ.ಆರ್.ಪೇಟೆ: ತಾಲ್ಲೂಕಿನ ಕತ್ತರಘಟ್ಟದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ದಲಿತ ರೈತ ಜಯಕುಮಾರ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಶುಕ್ರವಾರ ರಾತ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತನ ಪತ್ನಿ ಲಕ್ಷ್ಮಿ ಅವರೊಂದಿಗೆ ಮಾತನಾಡಿದ ಅವರು, ‘ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು. ಆರೋಪಿಗಳನ್ನು ಪತ್ತೆ ಹಚ್ಚಿ ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮಸ್ಥರು ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.