ADVERTISEMENT

ಸಾಧನಾ ಸಮಾವೇಶ 28ರಂದು

ಸಿ.ಎಂ ಸಿದ್ದರಾಮಯ್ಯ ಭಾಗಿ; ಸಮಾವೇಶ ಯಶಸ್ಸಿಗೆ ಶಾಸಕ ಕೆ.ಎಂ ಉದಯ್ ಕರೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 5:45 IST
Last Updated 12 ಜುಲೈ 2025, 5:45 IST
ಮದ್ದೂರು ಪಟ್ಟಣದ ಶಿವಪುರದಲ್ಲಿ ಶುಕ್ರವಾರ ನಡೆದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಎಂ ಉದಯ್ ಮಾತನಾಡಿದರು
ಮದ್ದೂರು ಪಟ್ಟಣದ ಶಿವಪುರದಲ್ಲಿ ಶುಕ್ರವಾರ ನಡೆದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಎಂ ಉದಯ್ ಮಾತನಾಡಿದರು   

ಮದ್ದೂರು: ಇದೇ 28ರಂದು ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಾಧನಾ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ ಉದಯ್ ತಿಳಿಸಿದರು.

ಪಟ್ಟಣದ ಶಿವಪುರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಮಾವೇಶದ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಕಾರ್ಯಕರ್ತರ ಪೂರ್ವಭಾವಿಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

‘ಇತಿಹಾಸದಲ್ಲಿ ಮೊದಲನೇ ಬಾರಿಗೆ ₹1,300 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ. ಅದಕ್ಕಾಗಿ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಇದು ನಮ್ಮ ತಾಲ್ಲೂಕಿನ ಹೆಮ್ಮೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹತ್ತಾರು ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ADVERTISEMENT

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ರವರು ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರ ಆಶಯದಂತೆ ಮದ್ದೂರಿನ ಶಾಸಕರು ತಮ್ಮ ಸ್ವಂತ ಜಾಗವನ್ನು ಬ್ಲಾಕ್ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ದಾನ ನೀಡಿದ್ದಾರೆ ಎಂದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಸಿ.ಎ ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ತಾಲ್ಲೂಕು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಮತಾ, ಯುವ ಘಟಕದ ಅಧ್ಯಕ್ಷ ಕೀರ್ತಿ ಗೌಡ, ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಪ್ರಸನ್ನ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಮುಖಂಡರಾದ ತಿಮ್ಮದಾಸ್ ಶಂಕರ್, ಕದಲೂರು ರಾಮಕೃಷ್ಣ ಇದ್ದರು.

ಮಧು ಜಿ. ಮಾದೇಗೌಡ ಗೈರು:

ಮುಖ್ಯಮಂತ್ರಿ ಭಾಗವಹಿಸುವ ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನಡೆದ ಕಾರ್ಯಕರ್ತರ ಸಭೆಗೆ ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರ ಗೈರುಹಾಜರಾಗಿದ್ದರು.

Quote - ನೂತನ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ಸಾರ್ವಜನಿಕ ಆಸ್ಪತ್ರೆಯ ಉನ್ನತೀಕರಣ ಕಾಮಗಾರಿ ಸೇರಿದಂತೆ ಇನ್ನಿತರ ಕಾಮಗಾರಿಗಳು ಮುಂದಿನ ದಿನಗಳಲ್ಲಿ ನಡೆಯಲಿವೆ ಕೆ.ಎಂ ಉದಯ್ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.