ಪಾಂಡವಪುರ: ತಾಲ್ಲೂಕಿನ ನುಗ್ಗಹಳ್ಳಿ ಗ್ರಾಮದ ರಸ್ತೆಯ ₹2.20ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ನುಗ್ಗಹಳ್ಳಿ ಗ್ರಾಮ ಪರಿಮಿತಿಯ ಮುಖ್ಯ ರಸ್ತೆಯಲ್ಲಿ ಸಂಚಾರ ಕಷ್ಟಕರವಾಗಿತ್ತು. ನವೀಕರಿಸಲು ಗ್ರಾಮಸ್ಥರು ಮನವಿ ಮಾಡಿದ್ದರು. ರಸ್ತೆ ಅಭಿವೃದ್ದಿಗಾಗಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಇಲ್ಲಿನ ಮಂಡ್ಯ ಮುಖ್ಯರಸ್ತೆಯಿಂದ ಚಿಕ್ಕಮರಳಿ–ನುಗ್ಗಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯೂ ಹಾಳಾಗಿದ್ದು, ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೀಳಾ, ಮಾಜಿ ಅಧ್ಯಕ್ಷ ಸುದರ್ಶನ್, ಸದಸ್ಯೆ ವಸಂತ, ಪಿಡಿಒ ಪುರುಷೋತ್ತಮ್, ಎಇಇ ಜಯಕುಮಾರ್, ಮುಖಂಡರಾದ ಅರುಣ್ ಕುಮಾರ್, ಬೋರೇಗೌಡ, ರಾಮಕೃಷ್ಣೇಗೌಡ, ರಾಮೇಗೌಡ, ಸಿದ್ದೇಗೌಡ, ಕಾರ್ತೀಕ್, ಸಚ್ಚಿನ್, ಸತ್ಯರಾಜ್, ಶಾಂತಮೂರ್ತಿ, ನಾಗೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.