ADVERTISEMENT

ದೇವಾಲಯಗಳಲ್ಲಿ ನೆಮ್ಮದಿ ಇದೆ ಶಾಸಕ: ಎಚ್.ಟಿ. ಮಂಜು

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 6:03 IST
Last Updated 10 ಫೆಬ್ರುವರಿ 2026, 6:03 IST
ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಶ್ರೀ ಚಿಕ್ಕಯ್ಯ ಸ್ವಾಮಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ. ಮಂಜು ಅವರಿಗೆ ಗ್ರಾಮಸ್ಥರು ಅಭಿನಂದಿಸಿದರು
ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಶ್ರೀ ಚಿಕ್ಕಯ್ಯ ಸ್ವಾಮಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ. ಮಂಜು ಅವರಿಗೆ ಗ್ರಾಮಸ್ಥರು ಅಭಿನಂದಿಸಿದರು   

ಸಂತೇಬಾಚಹಳ್ಳಿ: ‘ಹಳ್ಳಿಗಳಲ್ಲಿ ದೇವಾಲಯಗಳನ್ನು ನಿರ್ಮಿಸಿ, ಪ್ರಾರ್ಥನಾ ಕೇಂದ್ರಗಳಾಗಿ ಮಾಡಿ ಸಂಸ್ಕೃತಿ ಹಾಗೂ ಪರಂಪರೆಯನ್ನು ಗ್ರಾಮೀಣ ಜನರು ರಕ್ಷಣೆ ಮಾಡುತ್ತಿದ್ದಾರೆ’ ಎಂದು ಶಾಸಕ ಎಚ್.ಟಿ. ಮಂಜು ಹೇಳಿದರು.

ಇಲ್ಲಿನ ಆದಿಹಳ್ಳಿಯಲ್ಲಿ ನಿರ್ಮಾಣವಾಗಿರುವ ಶ್ರೀ ಚಿಕ್ಕಯ್ಯಸ್ವಾಮಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಹಳ್ಳಿಗಳಲ್ಲಿ ರೈತ ಮುಖಂಡರು ಸೇರಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ದೇವಾಲಯ ನಿರ್ಮಾಣ ಮಾಡಿದ್ದಾರೆ. ಗ್ರಾಮಗಳಲ್ಲಿ ದೇವಾಲಯಗಳಿದ್ದರೆ ನೆಮ್ಮದಿ ನೆಲೆಸುತ್ತದೆ. ವಾರಕ್ಕೊಮ್ಮೆ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಗಂಟೆಯ ಶಬ್ದ ಕೇಳಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದಿಹಳ್ಳಿಯಲ್ಲಿ ಹೆಚ್ಚು ಹೊಸ ದೇವಾಲಯಗಳು ಇವೆ ಎಂದರು.

ADVERTISEMENT

ಗ್ರಾಮದಲ್ಲಿ ವಿವಿಧ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು. ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದರು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಆರ್‌ಟಿಒ ಮಲ್ಲಿಕಾರ್ಜುನ್, ಅರ್ಚಕರು, ಗ್ರಾಮಸ್ಥರು, ಸುತ್ತ ಮುತ್ತಲ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.