ಕೆ.ಆರ್.ಪೇಟೆ: ಪಟ್ಟಣದ ಕೆಪಿಎಸ್ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಶಾಸಕ ಎಚ್.ಟಿ.ಮಂಜು, ಕಾಲೇಜಿನ ಪ್ರಾಂಶುಪಾಲ ಡಿ.ಬಿ.ಸತ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ, ಮುಖ್ಯ ಶಿಕ್ಷಕ ತಿಮ್ಮೇಗೌಡ ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಗುಲಾಬಿ ಹೂವಿನೊಂದಿಗೆ ಪಠ್ಯಪುಸ್ತಕಗಳು, ಸಮವಸ್ತ್ರ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶಾಲೆಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಶಾಸಕ ಎಚ್.ಟಿ.ಮಂಜು ಮಾತನಾಡಿ, ಪೋಷಕರು ಹೈಟೆಕ್ ಖಾಸಗಿ ಶಾಲೆಗಳು ಹಾಗೂ ಕಾನ್ವೆಂಟ್ ವ್ಯಾಮೋಹಕ್ಕೆ ಒಳಗಾಗದೆ, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಪ್ರಾಂಶುಪಾಲ ಡಿ.ಬಿ.ಸತ್ಯ, ಬಿಇಒ ತಿಮ್ಮೇಗೌಡ ಮಾತನಾಡಿ ಮಕ್ಕಳಿಗೆ ಶುಭ ಹಾರೈಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.