ADVERTISEMENT

Maddur Violence | ತಪ್ಪಿತಸ್ಥರನ್ನು ಸದೆ ಬಡಿಯುತ್ತೇವೆ: ಮದ್ದೂರು ಶಾಸಕ ಉದಯ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 12:31 IST
Last Updated 8 ಸೆಪ್ಟೆಂಬರ್ 2025, 12:31 IST
<div class="paragraphs"><p>ಕೆ.ಎಂ.ಉದಯ, ಮದ್ದೂರು ಶಾಸಕ</p></div>

ಕೆ.ಎಂ.ಉದಯ, ಮದ್ದೂರು ಶಾಸಕ

   

ಮದ್ದೂರು: ‘ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಘಟನೆ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದು ಮದ್ದೂರು ಶಾಸಕ ಕೆ.ಎಂ.ಉದಯ ತಿಳಿಸಿದ್ದಾರೆ.

‘ಯಾರೂ ಆತಂಕಕ್ಕೆ ಮತ್ತು ಉದ್ವೇಗಕ್ಕೆ ಒಳಗಾಗಬೇಡಿ. ನಮ್ಮ ತಾಲ್ಲೂಕಿನ ಜನತೆ ಶಾಂತಿ ಪ್ರಿಯರು. ಆಗಿರುವ ಘಟನೆಯನ್ನು ಸರಿಪಡಿಸಿಕೊಳ್ಳೋಣ. ತಪ್ಪಿತಸ್ಥರನ್ನು ಸದೆಬಡಿದು ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ನಿಮ್ಮ ಜೊತೆ ನಾವು ಯಾವಾಗಲೂ ಇರುತ್ತೇವೆ. ಎಲ್ಲರೂ ಶಾಂತಿ ಕಾಪಾಡುವಂತೆ ಕೈ ಮುಗಿದು ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.