ಅಪಘಾತ –ಪ್ರಾತಿನಿಧಿಕ ಚಿತ್ರ
ಮದ್ದೂರು: ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾ ಕಂಬಕ್ಕೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಹಾಗೂ ಮಗ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಬಳಿ ಸಂಭವಿಸಿದೆ.
ಬೆಂಗಳೂರಿನವರಾದ ದರ್ಶನ್ (21) ಹಾಗೂ ಅವರ ತಾಯಿ ಕಲಾ (40) ಮೃತರು. ಮಂಜುನಾಥ್ ಹಾಗೂ ಅವರ ಪತ್ನಿ ಮೇಘಾ ಅವರು ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯ ವಿವರ: ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮದ್ದೂರು ಪಟ್ಟಣದ ಬಳಿಯ ರುದ್ರಾಕ್ಷಿಪುರ ಬಳಿ ಶುಕ್ರವಾರ 3 ಘಂಟೆ ಸುಮಾರಿಗೆ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಕಾರಣ ಅಪಘಾತ ಸಂಭವಿಸಿದೆ.
ಮದ್ದೂರು ಪಟ್ಟಣದ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.